Friday, June 27, 2025

ರಿಕ್ಷಾ ಢಿಕ್ಕಿ : ಮೂರು ವರ್ಷದ ಮಗು ಸಾವು

ಬೆಳ್ತಂಗಡಿ: ಸೋಣಂದೂರು ಪಣಕಜೆಯಲ್ಲಿ ರಿಕ್ಷಾ ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.

ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್‌ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್‌ ಮೃತಪಟ್ಟ ಮಗು.

ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗುತ್ತಿದ್ದು, ಈ ಸಂದರ್ಭ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಯಾವುದೇ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ : ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ.. 

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಘಟನೆ ಜೂ. 22ರಂದು ಬದ್ಯಾ‌ರ್ ಸಮೀಪ ನಡೆದಿದೆ. ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಮೂರು ಜನ ಪ್ರಯಾಣಿಸುತ್ತಿದ್ದ ಆಟೋದಲ್ಲಿ ಸಹಸವಾರ ಕುಕ್ಕಳ, ಮಾಲಾಡಿ ಗ್ರಾಮ ಅಣ್ಣಿ...

ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

ಬಂಟ್ವಾಳ: ದ್ವಿಚಕ್ರವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ‌ತಾಲೂಕಿನ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು...