Saturday, January 31, 2026

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಬೇಬಿ ಕುಂದರ್ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ಆಯ್ಕೆಗೊಂಡ ಬೇಬಿ ಕುಂದರ್ ಅವರು ಬುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಚೇರಿಯಲ್ಲಿ ದೀಪ ಬೆಳಗಿಸಿ ಶುಭಹಾರೈಸಿದರು. ಬೇಬಿ ಕುಂದರ್ ಮಾತನಾಡಿ, ಜನತೆಗೆ ಬುಡಾ ಸೇವೆಗಳು ಸರಳ ರೀತಿಯಲ್ಲಿ ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಬುಡಾ ಸದಸ್ಯ ಕಾರ್ಯದರ್ಶಿ ಅಭಿಲಾಷ್, ನೂತನ ಸದಸ್ಯರಾದ ಮನೋಹರ ಕುಲಾಲ್ ನೇರಂಬೋಳು, ಹರೀಶ್ ಅಜ್ಜಿಬೆಟ್ಟು ಹಾಗೂ ಅಬ್ದುಲ್ ರಝಾಕ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್.ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಶ್ವನಿಕುಮಾರ್ ರೈ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್‌ಕುಮಾರ್ ಶೆಟ್ಟಿ, ಪ್ರಮುಖರಾದ ಮೋಹನ್ ಗೌಡ ಕಲ್ಮಂಜ, ಸುಹಾನ್ ಆಳ್ವ, ಕೆ.ಸಂಜೀವ ಪೂಜಾರಿ, ಸುರೇಶ್ ಜೋರಾ, ಇಬ್ರಾಹಿಂ ನವಾಜ್, ಪದ್ಮನಾಭ ರೈ, ಸುರೇಶ್‌ಕುಮಾರ್ ನಾವೂರು, ಜಯಂತಿ ವಿ.ಪೂಜಾರಿ, ನಾರಾಯಣ ನಾಯ್ಕ್, ಮಲ್ಲಿಕಾ ಶೆಟ್ಟಿ, ಸಂಪತ್‌ಕುಮಾರ್ ಶೆಟ್ಟಿ, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ ಮೊದಲಾದವರಿದ್ದರು. ಜಗದೀಶ್ ಕೊಯಿಲ ಕಾರ್ಯಕ್ರಮ ನಿರ್ವಹಿಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...