Wednesday, February 4, 2026

ಬಡಗಕಜೆಕಾರು: ಉಜ್ವಲ ಯೋಜನೆ ಉಚಿತ ಗ್ಯಾಸ್ ಸೌಲಭ್ಯ ವಿತರಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಬಡಗ ಕಜೆಕಾರು ಗ್ರಾ.ಪಂ.ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸೌಲಭ್ಯ ವಿತರಣೆ ಕಾರ್ಯಕ್ರಮ ಪಾಂಡವರಕಲ್ಲು ಸಮುದಾಯ ಭವನದಲ್ಲಿ ಜರಗಿತು.
ಗ್ರಾ.ಪಂ.ಅಧ್ಯಕ್ಷ ವಜ್ರ ಪೂಜಾರಿ ಬಾರ್ದೊಟ್ಟು ಅವರು ಗ್ಯಾಸ್ ಕಿಟ್ ವಿತರಿಸಿ ಮಾತನಾಡಿ, ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮ ಗಳು ಬೀಳದಂತೆ ಪ್ರಧಾನಮಂತ್ರಿಯವರು ವಿಶೇಷ ಕಾಳಜಿಯಿಂದ ಈ ಯೋಜನೆ ಜಾರಿಗೆ ತಂದಿದ್ದಾರೆ . ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಗ್ರಾ.ಪಂ.ಅ.ಅಧಿಕಾರಿ ಬಾಲಕೃಷ್ಣ ಪೂಜಾರಿ, ಪ್ರಮುಖರಾದ ವಾಸು ದೇವಾಡಿಗ, ದಿನೇಶ್ ಜೆಂಕ್ಯಾರು, ಹರೀಶ್ ಪ್ರಭು, ಪ್ರಮೋದ್ ಸಾಲ್ಯಾನ್, ಪ್ರವೀಣ್ ಗೌಡ, ಪ್ರವೀಣ ಪೂಜಾರಿ ಮಾಡ, ಮುತ್ತಪ್ಪ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಉದ್ಘೋಷಕ ಪ್ರಕಾಶ್ ಕರ್ಲ ಸ್ವಾಗತಿಸಿ , ವಂದಿಸಿದರು.

More from the blog

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...