ವಿಟ್ಲ: ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೇಣಿ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಮಂಗಳೂರು ಪುರಭವನದಲ್ಲಿ ರವಿವಾರ ಏರ್ಪಡಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶ್ರೀ ಭಾರತೀ ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ವೆಂಕಟೇಶ್ ಕೆ.ಎಂ., ಅರ್ಚನಾ ಎಂ. ಎಸ್. ಮತ್ತು ವಿವೇಕ್ ಕೆ.ಅವರು ಸ್ಪರ್ಧಿಸಿ ಪ್ರಥಮ ಬಹುಮಾನ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ದ.ಕ.ಹಾಗೂ ಉಡುಪಿ ಜಿಲ್ಲೆಯ 30 ತಂಡಗಳು ಭಾಗವಹಿಸಿದ್ದವು. ಕೊನೆಯ ಸುತ್ತಿನ ಸ್ಪರ್ಧೆಯಲ್ಲಿ ೫ ತಂಡಗಳಲ್ಲೊಂದಾಗಿದ್ದ ಭಾರತೀ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿದೆ. ಸಭಾ ಕಾರ್‍ಯಕ್ರಮದಲ್ಲಿ ಕಾಲೇಜಿಗೆ ಮತ್ತು ತಂಡದ ಸದಸ್ಯರಿಗೆ ಟ್ರೋಫಿ, ತಲಾ 1000 ರೂ. ನಗದು ಬಹುಮಾನವನ್ನು ವಿತರಿಸಲಾಯಿತು.

