ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ 2019-20ನೇ ಸಾಲಿನ ಅಂದಾಜು ಆಯವ್ಯಯಗಳ ಬಗ್ಗೆ ಮಂಡಿಸಲಾಯಿತು. ಅಧ್ಯಕ್ಷೆ ದಮಯಂತಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಪ.ಪಂ.ಸದಸ್ಯರು, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ಅಧಿಕಾರಿ ಪಕೀರ ಮೂಲ್ಯ, ಗುಮಾಸ್ತೆ ರತ್ನಾ ಮತ್ತಿತರರು ಉಪಸ್ಥಿತರಿದ್ದರು.
