Wednesday, July 9, 2025

ಬಜಪೆ: ಗಂಡನೇ ಹೆಂಡತಿಯನ್ನು ಕಲ್ಲಿನ ಕೋರೆಗೆ ದೂಡಿ ಹತ್ಯೆಗೈದು ಪರಾರಿ

ಮಂಗಳೂರು: ಟಿಪ್ಪರ್‌ ಚಾಲಕನೋರ್ವ ತನ್ನ ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಹತ್ಯೆಗೈದು ಪರಾರಿಯಾದ ಘಟನೆ ಬಜಪೆ ಸಮೀಪದ ಅಂತೋಣಿಕಟ್ಟೆಯಲ್ಲಿ ನಡೆದಿದೆ.

ಮೃತ ಮಹಿಳೆ ಕಾವೂರು ನಿವಾಸಿ ಶಾಂತಾ(30) ಎಂದು ಗುರುತಿಸಲಾಗಿದೆ.

ಹತ್ಯೆಗೈದ ವ್ಯಕ್ತಿ ಕಾವೂರಿನಲ್ಲಿ ಟಿಪ್ಪರ್‌ ಚಾಲಕನಾಗಿರುವ ಗಣೇಶ್‌ (40) ಮೂಲತಃ ಹಾಸನದ ನಿವಾಸಿಯಾಗಿದ್ದು, ಆತನ ಪತ್ನಿ ಶಾಂತಾ ಕಾಸರಗೋಡಿನ ಸಾಲೆತಡ್ಕ ನಿವಾಸಿ. ಇವರಿಗೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ. ಇವರು ಇತ್ತೀಚೆಗೆ ಕಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು.

ಗಂಡ-ಹೆಂಡತಿ ನಡುವೆ ವೈಮನಸ್ಸು ಉಂಟಾದ ಹಿನ್ನೆಲೆ ಪತ್ನಿ ಶಾಂತಾ ಮಕ್ಕಳನ್ನು ಕರೆದುಕೊಂಡು ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸವಾಗಿದ್ದರು. ಇತ್ತೀಚೆಗೆ ಪತಿ ಮಾತುಕತೆ ನಡೆಸಿ ಆಕೆಯನ್ನು ವಾಪಾಸ್ ಮನೆಗೆ ಕರೆದುಕೊಂಡು ಬಂದಿದ್ದನು. ಜು.1 ರ ಸಂಜೆ ಪತ್ನಿಯನ್ನು ವಾಪಾಸ್‌ ಕರೆದುಕೊಂಡು ಹೋದ ಪತಿ ವಾಪಾಸ್‌ ಕರೆದುಕೊಂಡು ಬಂದಿರದೇ ಜು. 2 ರಂದು ತನ್ನ ಮನೆಯಲ್ಲಿ ಮಕ್ಕಳೊಂದಿಗೆ ಇದ್ದ ಪತ್ನಿ ಶಾಂತಾ ಅವರ ತಾಯಿಗೆ ಕರೆ ಮಾಡಿ ಪತ್ನಿಯನ್ನು ಹತ್ಯೆ ಮಾಡಿದ್ದೇನೆ ಎಂದು ತಿಳಿಸಿದ್ದಾನೆ. ಬಳಿಕ ಆಕೆಯ ತಾಯಿ ಕಾಪೂರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಪೊಲೀಸರು ಆರೋಪಿ ಗಣೇಶ್‌ ಕಲ್ಲು ಸಾಗಾಟ ಮಾಡುತ್ತಿದ್ದ ಕರಂಬಾರಿನ ಕಲ್ಲಿನ ಕೋರೆಗೆ ಹೋಗಿದ್ದು, ಆತನ ಪತ್ನಿ ಶಾಂತಾ ಅವರ ಮೃತದೇಹ ಅಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಈ ಕಾರಣದಿಂದ ಆರೋಪಿ ಆಕೆಯ ಪತಿ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...