Thursday, June 26, 2025

ಬಂಟ್ವಾಳ: ಬಾಗಿಲು ತೆರೆದಿದ್ದ ಅಗತ್ಯ ವಸ್ತುಗಳಲ್ಲದ ಅಂಗಡಿಗಳನ್ನು ಬಂದ್ ಮಾಡಿಸಿದ ತಹಶೀಲ್ದಾರ್, ಪೊಲೀಸರು

ಬಂಟ್ವಾಳ: ಮಾರಕ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ನಿನ್ನೆ ರಾಜ್ಯ ಸರಕಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಬಂಟ್ವಾಳ ತಾಲೂಕಿನ ವಿವಿಧೆಡೆ ಇಂದು ಬೆಳಗ್ಗೆಯಿಂದ ಕಾರ್ಯಾಚರಣೆಗೆ ಇಳಿದ ಬಂಟ್ವಾಳ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳು ಅಗತ್ಯ ವಸ್ತುಗಳ ಅಲ್ಲದ ಅಂಗಡಿಗಳನ್ನು ಮುಚ್ಚಿಸಿದರು.

ಸರಕಾರ ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಎ.22ರಿಂದ ಮೇ 4ರ ವರೆಗೆ ಹಗಲು ಹೊತ್ತಲ್ಲಿ ಮೆಡಿಕಲ್, ರೇಷನ್ ಅಂಗಡಿ, ದಿನಸಿ, ತರಕಾರಿ, ಹಣ್ಣು, ಹಾಲು, ಮೀನು ಮತ್ತು ಮಾಂಸ, ಬ್ಯಾಂಕ್, ಸೆಲೂನ್, ಬ್ಯೂಟಿ ಪಾರ್ಲರ್ ಹಾಗೂ ಕಟ್ಟಡ ಕಾಮಗಾರಿಗಳಿಗೆ ಅಗತ್ಯವಿರುವ ವಸ್ತುಗಳ ಮಾರಾಟದ ಅಂಗಡಿಗಳಿಗೆ ಮಾತ್ರ ತೆರೆದಿಡಲು ಅವಕಾಶ ಇದೆ. ಬಾರ್, ಹೊಟೇಲ್ ಮತ್ತು ವೈನ್ ಶಾಪ್‌ಗಳು ತೆರೆದರೂ ಪಾರ್ಸೆಲ್‌ಗಷ್ಟೇ ಅವಕಾಶ. ಇದನ್ನು ಹೊರತು ಪಡಿಸಿ ಬಾಕಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಬೇಕಾಗಿದೆ.

ಶುಕ್ರವಾರ ಬೆಳಗ್ಗೆಯಿಂದ ಬಂಟ್ವಾಳ ತಾಲೂಕಿನ ಮಾಣಿ, ಕಲ್ಲಡ್ಕ, ಮೆಲ್ಕಾರ್, ಬಿ.ಸಿ.ರೋಡ್, ಕೈಕಂಬ, ತುಂಬೆ, ಫರಂಗಿಪೇಟೆ ಮೊದಲಾದೆಡೆ ಶೇಕಡಾ 50ರಷ್ಟು ಅಂಗಡಿಗಳು ಬಂದ್ ಆಗಿದ್ದವು. ಆದರೆ ಸರಕಾರ ಹೊರಡಿಸಿದ ಪರಿಷ್ಕೃತ ಮಾರ್ಗಸೂಚಿಯ ಗೊಂದಲ ಮತ್ತು ಮಾಹಿತಿಯ ಕೊರತೆಯಿಂದ ಬಂದ್ ಮಾಡಬೇಕಾದ ಪಟ್ಟಿಯಲ್ಲಿರುವ ಕೆಲವು ಅಂಗಡಿಗಳು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಬಾಗಿಲು ತೆರೆದಿದ್ದವು.

ಬೆಳಗ್ಗೆಯಿಂದ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದ ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್., ಬಂಟ್ವಾಳ ನಗರ ಠಾಣೆಯ ಎಸ್ಸೆöÊ ಅವಿನಾಶ್, ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೆöÊ ಪ್ರಸನ್ನ, ಬಂಟ್ವಾಳ ಪುರಸಭೆಯ ಅಧಿಕಾರಿಗಳು ಬಾಗಿಲು ತೆರೆದಿದ್ದ ಅಗತ್ಯ ವಸ್ತುಗಳ ಅಲ್ಲದ ಅಂಗಡಿಗಳನ್ನು ಬಂದ್ ಮಾಡಿಸಿದರು. ಅಲ್ಲದೆ ಮೈಕ್ ಮೂಲಕ ಈ ಬಗ್ಗೆ ಎಚ್ಚರಿಕೆ ಸಂದೇಶ ಹೊರಡಿಸಿದರು.

ಮಾಸ್ಕ್ ಧರಿಸದೆ ಬಂದ ಹಾಗು ಸಾಮಾಕಿಕ ಅಂತರ ಕಾಪಾಡದ ಗ್ರಾಹಕರಿಗೆ ಯಾವುದೇ ವಸ್ತುಗಳನ್ನು ನೀಡಬೇಡಿ ಎಂದು ಅಂಗಡಿಗಳ ಮಾಲಕರಿಗೆ ಸೂಚಿಸಿದರು. ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಜನರ ಸಂಚಾರಕ್ಕೆ ಮತ್ತು ವಾಹನಗಳ ಓಡಾಟಕ್ಕೂ ಯಾವುದೇ ನಿರ್ಬಂಧ ಇಲ್ಲ. ಆದರೆ ಕೊರೋನ ನಿಯಂತ್ರಿಸಲು ಸರಕಾರ ಹೊರಡಿಸಿರುವ ನಿಯಮಗಳನ್ನು ಪಾಲಿಸುವಂತೆ ಜನರಿಗೆ ಮತ್ತು ವಾಹನ ಸವಾರರಿಗೆ ಪೊಲೀಸರು ಮತ್ತು ಅಧಿಕಾರಿಗಳು ಸೂಚಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...