Wednesday, January 28, 2026

ಕರಾವಳಿಯ ಬಂದರು ಸಮಸ್ಯೆ ನಿವಾರಣೆಗೆ ಶಾಶ್ವತವಾಗಿ ಯಾವೆಲ್ಲ ಕ್ರಮ ಕೈಗೊಳ್ಳಬೇಕು ವ್ಯವಸ್ಥಿತ ಬಂದರು ನಿರ್ಮಾಣದ ಬಗ್ಗೆ ಚಿಂತನೆ: ಸಚಿವ ಅಂಗಾರ

ಮಂಗಳೂರು: ಮೀನುಗಾರಿಕೆ ಸಚಿವರಾದ ಅಂಗಾರ ರವರು ಮೀನುಗಾರಿಕ ಬಂದರಿಗೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯಗಳ ಬಗ್ಗೆ ವೀಕ್ಷಿಸಿದರು. ನಂತರ ಮೀನುಗಾರಿಕ ಕಾಲೇಜಿನಲ್ಲಿ ನೂತನವಾಗಿ7.9ಕೋಟಿ ವೆಚ್ಚದಲ್ಲಿ ನಿರ್ಮಿಸಲ್ಲಿರುವ ಅಲ್ಟ್ರಾ ಮಾಡರ್ನ್ ಅಕ್ವ ಕಲ್ಚರ್ ಘಟಕಗಳ( ಮೀನು ಉತ್ಪಾದನ ಪಾಂಡ್ ಗಳ ) ಭೂಮಿ ಪೂಜೆ ನೇರವೇರಿಸಿದರು.

ಮಂಗಳೂರು ಬಂದರಿನಲ್ಲಿರುವ ಮತ್ಸ್ಯಗಂಧಿ ಸಭಾಂಗಣದಲ್ಲಿ‌ ಮೀನುಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ಎಫ್ಎಫ್​ಪಿಒ (ಫಿಶ್ ಫಾರ್ಮರ್ಸ್ ಪ್ರೊಡ್ಯೂಸರ್ ಆರ್ಗನೈಸೇಷನ್) ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿ ಕರಾವಳಿಯ ಬಂದರು ಸಮಸ್ಯೆ ನಿವಾರಣೆಗೆ ಶಾಶ್ವತವಾಗಿ ಯಾವೆಲ್ಲ ಕ್ರಮ ಕೈಗೊಳ್ಳಬೇಕು ವ್ಯವಸ್ಥಿತ ಬಂದರು ನಿರ್ಮಾಣದ ಬಗ್ಗೆ ಗಮನ ಹರಿಸುತ್ತೇನೆ.ಸೂಕ್ಷ್ಮವಾಗಿ ಅಧ್ಯಯನ ನಡೆಸಿ ಇಲಾಖೆಯ ಅಧಿಕಾರಿಗಳು ಮತ್ತು ಮೀನುಗಾರಿಕಾ ಸಂಘಟನೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ, ವ್ಯವಸ್ಥಿತ ಬಂದರು ನಿರ್ಮಾಣದ ಬಗ್ಗೆ ಗಮನ ಹರಿಸುತ್ತೇನೆ ಎಂಬ ಭರವಸೆಯನ್ನು ನೀಡುತ್ತೇನೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ಬಂದರಿನ ಸಣ್ಣ – ಸಣ್ಣ ಸಮಸ್ಯೆಗಳನ್ನು ಶಾಶ್ವತವಾಗಿ ನಿವಾರಿಸಲು ತುರ್ತಾಗಿ ಗಮನ ಹರಿಸಲಾಗುತ್ತದೆ. ಮಂಗಳೂರು ಬಂದರಿನಲ್ಲಿ 1,200 ಯಾಂತ್ರಿಕ ಹಾಗೂ 1,300 ನಾಡ ದೋಣಿಗಳು ಸೇರಿ ಒಟ್ಟು 2,500 ದೋಣಿಗಳಿವೆ. ಆದರೆ, ಇದೀಗ ಬಂದರಿನಲ್ಲಿ 1,500 – 2,000 ದೋಣಿಗಳಿಗೆ ಮಾತ್ರ ನಿಲುಗಡೆಗೆ ವ್ಯವಸ್ಥೆಗಳಿದ್ದು, ಉಳಿದ ದೋಣಿಗಳಿಗೆ ಲಂಗರು ಹಾಕಲು ಸರಿಯಾದ ವ್ಯವಸ್ಥೆಗಳಿಲ್ಲ. ಯಾವುದೇ ಸರ್ಕಾರಗಳಿರಲಿ, ಅದರೆ ನಾನು ಒಂದು ಯೋಜನೆಗೆ ಸೂಕ್ತ ರೀತಿಯ ಪರಿಹಾರ ನೀಡುವುದಿಲ್ಲ. ಆದರೆ, ನಮ್ಮಲ್ಲಿ ಭವಿಷ್ಯದ ದೂರದೃಷ್ಟಿತ್ವ ಇದ್ದಲ್ಲಿ ಸರ್ಕಾರದಿಂದ ದೊರಕುವ ಅನುದಾನ ಹಾಗೂ ಒಂದು ಯೋಜನೆಗೆ ಬೇಕಾಗಬಹುದಾದ ಪರಿಸ್ಥಿತಿ ಕೂಡಾ ಸುಧಾರಿಸಲು ಸಾಧ್ಯ.ಕೇಂದ್ರ ಮತ್ತು ರಾಜ್ಯಸರಕಾರದ ಯೋಜನೆಯನ್ನು ಸಮರ್ಪಕವಾಗಿ ಬಳಸಿ ಯೋಜನೆಯನ್ನು ಕಾರ್ಯಗತಗೊಳಿಸಬೇಕಾಗಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯ, ಮೀನುಗಾರಿಕೆ ಸಲಕರಣೆಗಳ ಕಿಟ್ ಸವಲತ್ತುಗಳ ವಿತರಣೆ, ಎಫ್ಆರ್ ಪಿ ದೋಣಿ, ಬಲೆ ಮತ್ತು ಇಂಜಿನ್ ವಿತರಣೆ, ಮೀನುಗಾರಿಕೆ ಸುರಕ್ಷತಾ ಸಾಧನಗಳ ಖರೀದಿಗೆ ಸಹಾಯಧನ, ಸೀಗಡಿಕೊಳ ನಿರ್ಮಾಣಕ್ಕೆ ಸಹಾಯಧನ ಸೇರಿದಂತೆ ಮತ್ತಿತರ ಫಲಾನುಭವಿಗಳಿಗೆ ಸಚಿವರು ಸೌಲಭ್ಯ ವಿತರಣೆ ಮಾಡಿದರು.

More from the blog

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...