Wednesday, July 2, 2025

ಬ್ಯಾಂಕ್ ನೊಳಗೆ ನಗದು ಬ್ಯಾಗು ಕಳವು : ಆರೋಪಿ ಅರೆಸ್ಟ್

ಬಂಟ್ವಾಳ: ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ.

ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ ಎಂಬಾತನನ್ನು ಬಂಟ್ವಾಳ ಸರಪಾಡಿಯ ಮಣಿನಾಲ್ಕೂರು ಎಂಬಲ್ಲಿ ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ. 4 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿ ಎನ್ ಎಸ್ – 2023 ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ ನಗದು ಹಣವನ್ನು ಸ್ವಾಧೀನಪಡಿಸಿರುತ್ತಾರೆ.

ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್, ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರರವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಡಿ‌ವೈಎಸ್.ಪಿ ಎಸ್. ವಿಜಯಪ್ರಸಾದ್ ರವರ ನೇತೃತ್ವದ, ಗ್ರಾಮಾಂತರ ಎಸ್.ಐ. ಹರೀಶ್ ಎಂ.ಆರ್, ಪಿ.ಎಸ್. ಐ. ರವರ ವಿಶೇಷ ಪತ್ತೆ ತಂಡವನ್ನು ರಚಿಸಿದ್ದರು‌. ತನಿಖಾ ತಂಡದಲ್ಲಿ ಹೆಚ್ ಸಿ ಹರಿಶ್ಚಂದ್ರ , ಹೆಚ್ ಸಿ ರಾಧಾಕೃಷ್ಣ, ಪಿಸಿಗಳಾದ ಬಸವರಾಜ ಎಚ್ ,ಕೆ, ಕುಮಾರ್ ಎಚ್,ಕೆ, ಅಶೋಕ ಮತ್ತು ರಂಜಾನ್ ರವರುಗಳು ಪತ್ತೆ ಕಾರ್ಯದಲ್ಲಿ ಕಾರ್ಯನಿರ್ವಹಿಸಿರುತ್ತಾರೆ ಎಂದು ಎಸ್.ಪಿ.ಕಚೇರಿಯ ಸಾಮಾಜಿಕ ಜಾಲತಾಣದಲ್ಲಿ ನಮೂದಿಸಲಾಗಿದೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶಿಷ್ಯ ವರ್ಗವಾದ ಭಾಲಾವಲಿಕಾರ್ ಮತ್ತು ರಾಜಾಪುರ ಸಾರಸ್ವತ ಸಮಾಜದ ಬಾಂಧವರ ಮಹಾ ಸಭೆ

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶಿಷ್ಯ ವರ್ಗವಾದ ಭಾಲಾವಲಿಕಾರ್ ಮತ್ತು ರಾಜಾಪುರ ಸಾರಸ್ವತ ಸಮಾಜದ ಬಾಂಧವರ ವಿಷೇಶ ಮಹಾ ಸಭೆಯು, ಶ್ರೀ ಕೈವಲ್ಯ ಮಠ ಅನುಯಾಯಿಗಳ ಕ್ರಿಯಾ ಸಮಿತಿ ಮತ್ತು ಭಾಲಾವಲಿಕಾರ್/ರಾಜಾಪುರ...