Monday, January 26, 2026

ಫೆ.9 ರಂದು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ ಬಂದ್

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಬೆಂಗಳೂರಿನಲ್ಲಿ ಫೆಬ್ರವರಿ 9 ರಿಂದ 11 ದಿನಗಳ ಕಾಲ ಸಭೆ ನಡೆಯಲಿದೆ. ಸಭೆಯ ಭಾಗವಾಗಿ ಜಿ 20 ಸದಸ್ಯರು ಬೆಂಗಳೂರಿನ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಪ್ರೋಟೋಕಾಲ್ ಪ್ರಕಾರ ಬಿಬಿಪಿ, ಬಟರ್​ಫ್ಲೈ ಪಾರ್ಕ್​ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ. ಭಾರತ ಇಂಧನ ಸಪ್ತಾಹ, ಜಿ 20 ಸಭೆ ಹಾಗೂ ಏರ್ ಶೋ ಪರಿಣಾಮ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳ ವಾಸ್ತವ್ಯಕ್ಕೆ ನಗರದ ಹೋಟೆಲ್​ಗಳಲ್ಲಿನ ಅಂದಾಜು 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

 

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...