Wednesday, February 12, 2025

ಬಂಟವಾಳ ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ದೇವಳದಲ್ಲಿ 200ನೇ ವರ್ಷದ ಬ್ರಹ್ಮರಥೋತ್ಸವ : ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿವಿಧ ಕಾರ್ಯಕ್ರಮ

ಬಂಟ್ವಾಳ: ಬಂಟವಾಳ ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ದೇವಳದಲ್ಲಿ 200ನೇ ವರ್ಷದ ಬ್ರಹ್ಮರಥೋತ್ಸವದ ಹಿನ್ನಲೆಯಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ವಿವಿಧ ಕಾರ್ಯಕ್ರಮಗಳು ನಡೆಯಿತು.

ಬೆಳಿಗ್ಗೆ ದೇವಳದಲ್ಲಿ “ಚಕ್ರಾಬ್ಜ ಮಂಡಲ ಪೂಜೆ,ಬಳಿಕ ಮಹಿಳೆಯರಿಂದ ಲಕ್ಷ ತುಳಸಿ ಪುಪ್ಪಾರ್ಚನೆ, ಕಾಶೀಮಠದ ವೃಂದಾವನದಲ್ಲಿ ಶ್ರೀ ಹನುಮಂತದೇವರಿಗೆ “ಗಂಧಲೇಪನ” ಸಂಜೆ ದೇವಳದ ಮುಂಭಾಗದಲ್ಲಿರುವ ನೇತ್ರಾವತಿ ನದೊತೀರದಲ್ಲಿ ಸಮಾಜದ ಮಹಿಳೆಯರಿಂದ ಕುಂಕುಮಾರ್ಚನೆ ಹಾಗೂ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಪವಿತ್ರ ನೇತ್ರಾವತಿ ನದಿಗೆ “ಗಂಗಾರತಿ” ನೆರವೇರಿತು.

ನಂತರ ದೇವರಿಗೆ ದೀಪ ನಮಸ್ಕಾರ, ದೀಪಾಲಂಕಾರ,ರಾತ್ರಿ ಗೋಪುರೋತ್ಸವ, ಒಳಾಂಗಣ ಹನುಮಂತೋತ್ಸವ,ವಸಂತಪೂಜೆ,ಅಷ್ಠಾವಧಾನ ಸೇವೆ ನಡೆಯಿತು.

ಶ್ರೀದೇವರಿಗೆ ಬ್ರಹ್ಮರಥ ಸಮರ್ಪಣೆಯಾಗಿ 200 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ದೇವಳದ ವತಿಯಿಂದ ನಡೆಯುವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಶಾಲಾ ವಾಹನ,ದೇವಳದ ಪಟ್ಟದ ದೇವರು ಶ್ರೀನಿವಾಸ ಹಾಗೂ ಉತ್ಸವ ಮೂರ್ತಿ ಶ್ರೀವೆಂಕಟರಮಣನಿಗೆ ತಲಾ 50 ಪವನಿನ ಚಿನ್ನದ ಸರ,ಶ್ರೀ ವೀರಮಾರುತಿಗೆ ಅಭರಣ ಹಾಗೂ ಬ್ರಹ್ಮರಥದಲ್ಲಿ ಶ್ರೀದೇವರು ಕುಳಿತುಕೊಳ್ಳುವ ಪೀಠಕ್ಕೆ 10 ಕೆ.ಜಿ.ಬೆಳ್ಳಿಯ ಪ್ರಭಾವಳಿಯನ್ನು ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮೂಲಕ ಸಮರ್ಪಸಲಾಯಿತು.

ದೇವಳದ ಆಡಳಿತ ಮೊಕ್ತೇಸರರು,ಮೊಕ್ತೇಸರರು ಸಹಿತ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...