Monday, January 26, 2026

ಶಿಕ್ಷಕಿ ತ್ರಿವೇಣಿ ಅವರಿಗೆ ಡಾಕ್ಟರೇಟ್ ಪದವಿ

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲ್ಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇದರ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಜುಲೈ 24ರಂದು ಗೋವಾದಲ್ಲಿ  ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ, ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

     ಕಳೆದ 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಾತ್ರವಲ್ಲದೇ, ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು 2019- 20 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಬಾಜನರಾದ ಇವರು ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಶಾಖೆಯ ಮೆಸ್ಕಾಂ ಉದ್ಯೋಗಿ ಮುಜಲ ರಮೇಶ್ ಪೂಜಾರಿಯವರ ಧರ್ಮ ಪತ್ನಿಯಾಗಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...