Monday, January 26, 2026

ತೌಹೀದ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ರಕ್ಷಕ ಸಂಘದ ಸಭೆ

ಬಂಟ್ವಾಳ (ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕರ ಸಭೆ ಜುಲೈ 24 ರಂದು ಆದಿತ್ಯವಾರ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಿಯಾಜ್ ಹುಸೈನ್ ನೇತೃತ್ವದಲ್ಲಿ ಜರಗಿತು.

ಸಸಿ ನೆಡುವ ಮೂಲಕ ಸಭೆಯನ್ನು ಉದ್ಘಾಟಿಸಲಾಯಿತು,ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್ ಅಮಾನುಲ್ಲಾರವರು ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒಂದೇ ನಾಣ್ಯದ ಎರಡು ಮುಖಗಳಂತಿರುವ ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಗಳ ಅರಿವು ಮೂಡಿಸಿದರು.ಮುಸ್ಲಿಂ ಶಾಲಾ ಒಕ್ಕೂಟದ ಅಧ್ಯಕ್ಷರಾದ ಮೂಸಬ್ಬ ಬ್ಯಾರಿಯ ವಿದ್ಯಾರ್ಥಿಗಳು ಸಂಸ್ಕಾರಯುತ ಜೀವನವನ್ನು ರೂಪಿಸಲು ಬೇಕಾದ ಸಲಹೆಗಳನ್ನು ನೀಡಿದರು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಪಿ ಜ್ಞಾನೇಶ್‌ರವರು ಕೊರೊನಾ ಲಸಿಕೆಯ ಮಹತ್ವದ ಕುರಿತು ಪೋಷಕರಿಗೆ ಸಲಹೆ ನೀಡಿದರು.ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಹಾಜಿ ಬಿ.ಎಚ್.ಖಾದರ್ ರವರು ಪೋತ್ಸಾಹಿತ ಮಾತುಗಳನ್ನಾಡುವ ಮೂಲಕ ಪೋಷಕರನ್ನು ಹುರಿದುಂಬಿಸಿದರು.ಈ ಸಂದರ್ಭದಲ್ಲಿ 2021-22 ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 24 ವಿದಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಅಬ್ದುಲ್ ಖಾದರ್‌ರವರು ಸಂಕ್ಷಿಪ್ತ ವರದಿಯನ್ನು ಮಂಡಿಸಿದರು. ಶಾಲಾ ಮುಖ್ಯಶಿಕ್ಷಕಿ ಮೆಟೆಲ್ಲಾ ಡಿ ಕೋಸ್ತಾರವರು ಶಾಲೆಯ ನಿಯಮ ನಿಬಂಧನೆಗಳ ಬಗ್ಗೆ ಸವಿಸ್ತಾರವಾಗಿ ಪೋಷಕರಿಗೆ ಮನವರಿಕೆ ಮಾಡಿದರು. ತೌಹೀದ್‌ ಮದರಸ ವಿಭಾಗದ ಸದರ್ ಅಬ್ದುಲ್ ಮಜೀದ್ ಫೈಝಿ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಸ್ತಿನ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಮೊಹಮ್ಮದ್ ಸಗೀರ್, ಬಂಟ್ವಾಳ ಜುಮಾ ಮಸೀದಿಯ ಅಧ್ಯಕ್ಷರಾದ ಅಹ್ಮದ್ ಶಾಫಿ, ಶಿಕ್ಷಕ- ರಕ್ತಕ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹನೀಫ್, ಶಾಲಾ ಆಡಳಿತ ಮಂಡಳಿಯ ಖಜಾಂಜಿಯಾದ ಅಬ್ದುಲ್‌ ರಹಿಮಾನ್, ಸದಸ್ಯರಾದ ಮುನಿಶ್ ಆಲಿ, ಉದುಲ್ಲಾ, ಹಾರೂನ್ ರಶೀದ್, ಸನಾವುಲ್ಲ, ರಿಯಾಝ್, ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳನ್ನು ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡುವ ಮೂಲಕ ಅಭಿನಂದಿಸಲಾಯಿತು.

ಮುಖ್ಯಶಿಕ್ಷಕಿಯಾದ ಮೆಟೆಲ್ಲಾ ಇವರು ಸ್ವಾಗತಿಸಿ, ಸಹಮುಖ್ಯಶಿಕ್ಷಕಿ ರಚನ ಇವರು ವಂದಿಸಿದರು ಮತ್ತು ಸಹಶಿಕ್ಷಕಿಯರಾದ ನಿಶ್ಮಿತಾ, ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...