Monday, January 26, 2026

ಸುರತ್ಕಲ್ ಯುವಕನ ಕೊಲೆ, ದ.ಕ.ಜಿಲ್ಲೆಯಲ್ಲಿ ಬಿಗುವಿನ ವಾತಾವರಣ: ಬಂಟ್ವಾಳದಲ್ಲಿ ಎಸ್.ಪಿ.ಹರಿರಾಂ ಶಂಕರ್ ನೇತೃತ್ವದಲ್ಲಿ ಬಿಗಿಬಂದೋಬಸ್ತ್

ಬಂಟ್ವಾಳ: ದ.ಕ.ಜಿಲ್ಲೆಯ ಬೆಳ್ಳಾರೆ ಹಿಂದೂ ಸಂಘ ಟನೆ ಹಾಗೂ ಬಿಜೆಪಿ ಪ್ರಮುಖ ನೆಟ್ಟಾರು ಪ್ರವೀಣ್ ಕೊಲೆಯ ಬೆನ್ನಲ್ಲೆ ಸುರತ್ಕಲ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಗಂಭೀರ ಸ್ವರೂಪದ ಗಾಯಗಳಾಗಿ ಜೀವನ್ಮರಣ ಹೋರಾಟದಲ್ಲಿ ರುವ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಸದ್ಯ ಸುರತ್ಕಲ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.  ಕೊಲೆ ಯತ್ನಕ್ಕೆ ಕಾರಣ ಸ್ಪಷ್ಟವಾಗಿ ಕಂಡು ಬಂದಿಲ್ಲ.

*ಬಂಟ್ವಾಳದಲ್ಲಿ ಬಿಗಿಬಂದೋಬಸ್ತ್*

ಎರಡು ಘಟನೆಯ ಬಳಿಕ ದ.ಕ.ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಕೋಮುಸೂಕ್ಷ್ಮ ಬಂಟ್ವಾಳ ತಾಲೂಕಿನಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲಾಗಿದೆ.

‌ ಹಾಸನ ಎಸ್.ಪಿ.ಹರಿರಾಂ ಶಂಕರ್ ಅವರು ಬಂಟ್ವಾಳದಲ್ಲಿ ತಂಗಿದ್ದು, ಇವರಿಗೆ ಬಂಟ್ವಾಳ ತಾಲೂಕಿನ ಕಾನೂನು ಸುವ್ಯವಸ್ಥೆಯನ್ನು ಬಿಗಿ ಮಾಡಲು ಮೇಲಾಧಿಕಾರಿಗಳು ಸೂಚನೆ ನೀಡಿದ್ದಾರೆ.  ಬಂಟ್ವಾಳದ ಸುತ್ತ ಮುತ್ತ ಹೆಚ್ಚುವರಿ ಪೋಲೀಸರನ್ನು ನಿಯೋಜನೆ ಮಾಡಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...