Monday, January 26, 2026

*ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರ ಸಭೆ*

*ಬಂಟ್ವಾಳ, 24 ಆಗಸ್ಟ್ 2022 :-* ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಪಕ್ಷದ ಕಾರ್ಯಕರ್ತರ ಸಭಾ ಕಾರ್ಯಕ್ರಮವು ಬಿಸಿ ರೋಡ್ ನ ಅಲ್ ಖಝಾನ ಸಭಾಂಗಣದಲ್ಲಿ ಜರುಗಿತು. ಈ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಎಸ್ ಎಚ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು

ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಮಾತನಾಡಿ “ರಾಜ್ಯ ಬಿಜೆಪಿಯು ನಿರಂಕುಶವಾದದ ಧೋರಣೆಗಳನ್ನು ಎಸಗುತ್ತಿರುವುದನ್ನು ಕಂಡೂ ಕಾಣದಂತೆ ವರ್ತಿಸುತ್ತಿರುವ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿಗಳಂತಹ ಜಾತ್ಯಾತೀತ ಪಕ್ಷಗಳು ಮೌನದಿಂದಿರುವುದು ಖಂಡನಾರ್ಹ. ಮುಸ್ಲಿಮರ, ದಲಿತರ ,ಕ್ರೈಸ್ತರ ಮತಗಳನ್ನು ಪಡೆದು ಅಧಿಕಾರಕ್ಕೇರಿ ಆ ಬಳಿಕ ಬಿಜೆಪಿಗೆ ಮಾರಾಟವಾಗುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳ ಕರ್ಮಕಾಂಡವನ್ನು ಜನತೆಗೆ ತಿಳಿಪಡಿಸಬೇಕಾಗಿದೆ. ಆಮ್ ಆದ್ಮಿ ಎಂಬ ಪಕ್ಷವು ಹುಸಿ ಜಾತ್ಯಾತೀತ ಚಿಂತನೆಯಿಂದ ಕೂಡಿದ್ದು, ಬಾಬರಿ ಮಸೀದಿ ನಿಲುವಿನಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿ ಮುಸ್ಲಿಮರಿಗೆ ದ್ರೋಹಬಗೆದಿರುವ ವಿಚಾರ ಋಜುವಾತಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದು, ಅದರಲ್ಲಿ ಬಂಟ್ವಾಳವೂ ಒಂದಾಗಿದೆ. ಪರ್ಯಾಯ ರಾಜಕೀಯ ವ್ಯವಸ್ಥೆ ಎಸ್ ಡಿ ಪಿ ಐ ಕುರಿತು ಜನಮನದಲ್ಲಿ ಅಚ್ಚುಮೂಡಿಸಿ ಬಂಟ್ವಾಳದಲ್ಲಿ ಗೆಲ್ಲಿಸುವ ಶತ ಪ್ರಯತ್ನವನ್ನು ಕಾರ್ಯಕರ್ತರು ಮಾಡಬೇಕು. ಪ್ರತಿಯೊಂದು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ನೆರೆದಿರುವ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ “ಪ್ರಸ್ತುತ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಮತ್ತು ಅದರ ಧುರೀಣರು ಸಂಪೂರ್ಣವಾಗಿ ಭ್ರಷ್ಟಾಚಾರ, ಮಿತಿಮೀರಿದ ಕೋಮುವಾದ ಚಿಂತನೆಗಳಂತಹ ಅರಾಜಕತೆಯಲ್ಲಿ ಮುಳುಗಿಹೋಗಿದ್ದಾರೆ. ಈ ಎಲ್ಲಾ ಸತ್ಯದ ಸಂಗತಿಗಳನ್ನು ಪಕ್ಷದ ಕಾರ್ಯಕರ್ತರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಎಳೆಎಳೆಯಾಗಿ ಬಿಚ್ಚಿಡುವ ಮೂಲಕ ಭಾಜಪಾವನ್ನು ಅಧಿಕಾರದಿಂದ ನಿರ್ಮೂಲನೆ ಮಾಡುವಲ್ಲಿ ನಿರತರಾಗಬೇಕು” ಎಂದು ಹೇಳಿದರು. ಎಸ್ ಡಿ ಪಿ ಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಲಾಯಿ ಪಕ್ಷದ ಬೆಳವಣಿಗೆ ಮತ್ತು ಪ್ರಸ್ತುತ ಆಗುಹೋಗುಗಳ ಬಗ್ಗೆ ನುಡಿದು ಪ್ರಾಸ್ತಾವಿಕ ಭಾಷಣಗೈದರು. ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಸಮಾರೋಪ ಭಾಷಣಗೈದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ದ.ಕ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ದ.ಕ ಜಿಲ್ಲಾ ಸಮಿತಿ ಸದಸ್ಯರುಗಳಾದ ಅಬೂಬಕ್ಕರ್ ಮದ್ದ, ಯೂಸುಫ್ ಆಲಡ್ಕ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ , ಬಂಟ್ವಾಳ ತಾಲೂಕಿನವರು ಆದ ಇಲ್ಯಾಸ್ ಮುಹಮ್ಮದ್ ತುಂಬೆಯವರನ್ನು ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಶಾಲು ಹಾಕಿ ಹೂಗುಚ್ಚ ನೀಡಿ ಸನ್ಮಾನಿಸಲಾಯಿತು . ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು ಶಾಹುಲ್ ಹಮೀದ್ ಸ್ವಾಗತಿಸಿ ಮೂನಿಶ್ ಆಲಿ ಧನ್ಯವಾದಗೈದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...