Tuesday, February 11, 2025

ಬಿ.ಸಿ.ರೋಡ್ : ‘ರಾಣಿ ಅಬ್ಬಕ್ಕ ಪಡೆ’ಗೆ ಎಸ್ ಪಿ ಲಕ್ಷ್ಮೀಪ್ರಸಾದ್ ಚಾಲನೆ

ಬಂಟ್ವಾಳ: ಮಹಿಳೆ ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮಹಿಳಾ ಪೊಲೀಸರನ್ನೊಳಗೊಂಡ ‘ರಾಣಿ ಅಬ್ಬಕ್ಕ ಪಡೆ’ ರಚನೆಯಾಗಿದ್ದು, ಬಂಟ್ವಾಳ ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಸೋಮವಾರ ಚಾಲನೆ ನೀಡಿದರು.
ಬಿ.ಸಿ.ರೋಡಿನ ಜಂಕ್ಷನ್‌ನಲ್ಲಿ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿ ಮಾತನಾಡಿದ ಅವರು, ಡಿಜಿ, ಐಜಿಪಿ ಅವರ ಸೂಚನೆ ಮೇರೆಗೆ  ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ವಿಶೇಷ ಮಹಿಳಾ ಪಡೆ ರಚಿಸಲಾಗಿದೆ ಎಂದರು.

ಈ ಪಡೆಯನ್ನು ಒಬ್ಬರು ಎಸ್ಸೈ ದರ್ಜೆ ಮಹಿಳಾ ಅಧಿಕಾರಿ ನಿರ್ವಹಣೆ ಮಾಡಲಿದ್ದಾರೆ. ನಗರದಲ್ಲಿರುವ ಜನನಿಬಿಡ ಪ್ರದೇಶಗಳಾದ ಕಾಲೇಜುಗಳು, ಪಾರ್ಕ್‌ಗಳು, ರೈಲ್ವೆ ನಿಲ್ದಾಣ, ಮಾರ್ಕೆಟ್ ಸೇರಿದಂತೆ ಕೆಲವು ಪ್ರದೇಶದಲ್ಲಿ ಈ ಪಡೆಯ ಸಿಬ್ಬಂದಿ ನಿಯೋಜಿಸಲಾಗುವುದು. ದ.ಕ. ವ್ಯಾಪ್ತಿಯಲ್ಲಿ 50ಮಂದಿ ಮಹಿಳಾ ಪೊಲೀಸರಿದ್ದು, ಒಂದೊಂದು ಪಾಯಿಂಟ್‌ಗಳಲ್ಲಿ ೩ರಿಂದ ೫ಮಂದಿ ಕಾರ್ಯನಿರ್ವಹಿಸಲಿದ್ದಾರೆ. ಅಪರಾಧ ಸಂಬಂಧಿತ ಪ್ರಕರಣಗಳು ನಡೆದಾಗ ಆಯಾಯ ಪೊಲೀಸ್ ಠಾಣಾ ವ್ಯಾಪ್ತಿಗೆ ಈ ಪ್ರಕರಣಗಳು ಬರಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಡಿಷನಲ್ ಎಸ್ಪಿ ಡಾ.ವಿಕ್ರಂ ವಿ. ಅಮ್ಟೆ, ಎಎಸ್ಪಿ ಸೈದುಲ್ ಅಡಾವತ್, ಬಂಟ್ವಾಳ ವೃತ್ತ ನೀರೀಕ್ಷಕ ಶರಣಗೌಡ, ಸುಳ್ಯ ಸಿಪಿಐ ಸತೀಶ್ ಕುಮಾರ್, ಬೆಳ್ತಂಗಡಿ ಸಿಪಿಐ ಸಂದೇಶ್, ಬಂಟ್ವಾಳ ಎಸ್ಸೈಗಳಾದ ಪ್ರಸನ್ನ, ಸುಧಾಕರ ತೋಮ್ಟೆ, ಮಂಜುನಾಥ, ನಾಯಾರಣ ರೈ, ಸಿಬ್ಬಂದಿ ಯೋಗೀಶ್, ಬೀಟ್ ಸದಸ್ಯರಾದ ವಸಂತಿ ಗಂಗಾಧರ, ಜೆಸಿಂತಾ ಹಾಜರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...