ಬಂಟ್ವಾಳ: ತೋಟವೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಅಡಿಕೆಯನ್ನು ಕದ್ದೊಯ್ದ ಘಟನೆ ಚೇಳೂರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.
ಕಿಶನ್ ರೈ ಎಂಬವರಿಗೆ ಸೇರಿದ ತೋಟದ ಮನೆಯಲ್ಲಿ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ತೋಟದ ಮನೆಯಲ್ಲಿ ಸುಲಿದಿಟ್ಟಿದ್ದ ಸುಮಾರು 338 ಕೆ.ಜಿ. ಒಣ ಅಡಿಕೆಯನ್ನು ಹೊತ್ತೊಯ್ದಿದ್ದಾರೆ. ಇದರ ಮೌಲ್ಯ ಸುಮಾರು 49 ಸಾವಿರ ರೂ. ಎಂದು ಅಂದಾಜಿಸಲಾಗಿದೆ ಎಂದು ಕಿಶನ್ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


