ಬಂಟ್ವಾಳ: ಬಿ.ಸಿ.ರೋಡಿನ ವಿವೇಕ ನಗರದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಎದುರುಗಡೆ ಸರ್ವೀಸ್ ರಸ್ತೆಯಲ್ಲಿ ಹಾದುಹೋಗುವ ವಿವೇಕ ನಗರದಲ್ಲಿ ಇರುವ ಖಾಲಿ ಜಾಗದಲ್ಲಿ ಸುಮಾರು (35 ) ವರ್ಷ ಪ್ರಾಯದ ಗಂಡು ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.



ಮಲಗಿದ ಸ್ಥಿತಿಯಲ್ಲಿ ಈತನ ಮೃತದೇಹ ಇದ್ದು, ಇದನ್ನು ನೋಡಿದ ಸ್ಥಳೀಯರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಶವವನ್ನು ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಶವಗಾರಕ್ಕೆ ಕಳುಹಿಸಲಾಗಿದೆ.