Thursday, January 29, 2026

ಈದ್ ಮಿಲಾದ್ ಪ್ರಯುಕ್ತ ನಗರ ಪೋಲೀಸ್ ಠಾಣೆಯಲ್ಲಿ ನೂತನ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ನೇತ್ರತ್ವದಲ್ಲಿ ಶಾಂತಿ ಸಭೆ

ಬಂಟ್ವಾಳ: ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು, ಕಾನೂನು ಬಾಹಿರವಾಗಿ ಯಾವುದೇ ಚಟುವಟಿಕೆಯಲ್ಲಿ ತೊಡಗಿರುವ ವಿಚಾರ ಗಮನಕ್ಕೆ ಬಂದರೆ ನಾನು ಸುಮ್ಮನಿರಲ್ಲ , ಯಾವುದೇ ಕಾರ್ಯಕ್ರಮಗಳು ಕಾನೂನುಬದ್ದವಾಗಿ ಶಾಂತಿಯುತವಾಗಿ ನಡೆಯಬೇಕು,ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದು ಎಂದು ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಸೆ.28 ರಂದು ನಡೆಯುವ ಈದ್ ಮಿಲಾದ್ ಕಾರ್ಯಕ್ರಮ ಅಂಗವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಶಾಂತಿ ಸಭೆಯಲ್ಲಿ ಮಾತನಾಡಿದರು.

ಸಾಮೂಹಿಕವಾಗಿ ,ಸಾಮಾಜಿಕವಾಗಿ ತಾಲೂಕಿನ ಎಲ್ಲಾ ಸಾರ್ವಜನಿಕರು ಜವಬ್ದಾರರು. ಕಾರ್ಯಕ್ರಮಗಳು ನಡೆಯುವಾಗ ಟ್ರಾಫಿಕ್ ಗೆ ಸಮಸ್ಯೆಗಳು ಆಗದಂತೆ ಕಾರ್ಯಕ್ರಮ ಸಂಯೋಜಕರು ಜಾಗೃತವಹಿಸಬೇಕು.

ಸಣ್ಣ ಪುಟ್ಟ ವಿಚಾರಗಳಿಗೆ ಸಮಸ್ಯೆಗಳು ಉಂಟಾಗಬಹುದು ಎಂಬುದು ಗಮನಕ್ಕೆ ಬಂದರೆ ನೇರವಾಗಿ ಪೋಲಿಸರಿಗೆ ಮಾಹಿತಿ ನೀಡಿ.ಯಾವುದೇ ಗೊಂದಲಕ್ಕೆ ಅವಕಾಶ ನೀಡಬೇಡಿ.ಕಾನೂನನ್ನು ಕೈಗೆತ್ತಿಕೊಂಡು ಅನಾಹುತಕ್ಕೆ ಕಾರಣವಾಗಬೇಡಿ ಎಂದು ಎಚ್ಚರಿಕೆಯ ಮಾತುಗಳನ್ನು ಹೇಳಿದರು.

ವೈಯಕ್ತಿಕವಾಗಿ ಅಥವಾ ಸಾಮಾಜಿಕ ಸಮಸ್ಯೆಗಳಿದ್ದರೆ, ಮುಕ್ತವಾಗಿ ನನ್ನ ಬಳಿ ತಿಳಿಸಿ,ಅಂತಹ ಯಾವುದೇ ಸಮಸ್ಯೆಗಳಿದ್ದರು ಪರಿಹಾರವನ್ನು ಮಾಡುವಲ್ಲಿ ಕ್ರಮಕೈಗೊಳ್ಳುವ ಭರವಸೆ ನೀಡುತ್ತೇನೆ ಎಂದು ಅವರು ತಿಳಿಸಿದರು.

ಟ್ರಾಫಿಕ್ ಸಮಸ್ಯೆಗಳಿಗೆ ಪೋಲೀಸ್ ಕಡೆಯಿಂದ ಯಾವ ಕ್ರಮಗಳು ಆಗಬೇಕು ಅದನ್ನು ಇಲಾಖೆ ಖಂಡಿತ ಮಾಡುತ್ತೇನೆ ಎಂದು ತಿಳಿಸಿದರು.

ನಗರ ಠಾಣಾ ಎಸ್.ಐ.ರಾಮಕೃಷ್ಣ, ಅಪರಾಧ ವಿಭಾಗದ ಎಸ್.ಐ.ಕಲೈಮಾರ್, ಟ್ರಾಫಿಕ್ ಎಸ್.ಐ.ಸುತೇಶ್ ಉಪಸ್ಥಿತರಿದ್ದರು.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...