Thursday, February 13, 2025

ಸ್ವಚ್ಚ ಸೋಚ್ ವಿಚಾರ ಸಂಕಿರಣ

ಬಂಟ್ವಾಳ: ಮಂಗಳೂರಿನ ರಾಮಕೃಷ್ಣ ಮಿಷನ್ ಇವರ ಸಹಯೋಗದಲ್ಲಿ ವಾಮದಪದವು ಸರಕಾರಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ “ಸ್ವಚ್ಛ ಸೋಚ್” ವಿಚಾರ ಸಂಕಿರಣ ಕಾಲೇಜಿನಲ್ಲಿ ನಡೆಯಿತು. ಭಾರತೀಯ ಭೂಸೇನೆಯ ನಿವೃತ್ತ ಅಧಿಕಾರಿ ಗೋಪಿನಾಥರಾವ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಇಂದಿನ ಆಧುನಿಕಜಗತ್ತಿನಲ್ಲಿ ತ್ಯಾಜ್ಯ ವಿಲೇವಾರಿ ಎಂಬುದು ದೊಡ್ಡ ಸಮಸ್ಯೆ ಆಗಿದ್ದು, ಜಗತ್ತಿನ ಪ್ರತಿಯೊಬ್ಬ ನಾಗರೀಕನು ಬಾಹ್ಯ ಹಾಗೂ ಆಂತರಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರು, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಡಾ.ರವಿ ಎಂ.ಎನ್. ಪ್ರಸ್ತಾವನೆಗೈದರು.ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಸಂಯೋಜನಾಧಿಕಾರಿ ರಂಜನ್ ಬೆಳ್ಳರ್ಪಾಡಿ ಹಾಗೂ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಸಂಪನ್ಮೂಲ ವ್ಯಕ್ತಿ ಪ್ರೊ. ರಾಜಮಣಿರಾಮಕುಂಜ, ಮತ್ತು ರೇಂಜರ್ ಲೀಡರ್ ಪ್ರೊ. ಉಷಾ ಬಿ. ಹಾಗೂ ಎನ್, ಎಸ್.ಎಸ್. ಘಟಕದ ಯೋಜನಾಧಿಕಾರಿಗಳಾದ ಡಾ. ಮೆರಿ ಎಂ. ಜೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಚಾರ ಸಂಕಿರಣದ ಸಂಯೋಜಕರಾದ ಪ್ರೊ.ಕೃಷ್ಣಮೂರ್ತಿಎನ್.ಬಿ. ಸ್ವಾಗತಿಸಿ, ಎನ್, ಎಸ್.ಎಸ್. ಘಟಕದ ಯೋಜನಾಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯಾ ವಂದಿಸಿದರು.
ಬಳಿಕ ನಡೆದ ಮೊದಲ ಗೋಷ್ಠಿಯಲ್ಲಿ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಪ್ರೊ. ರಾಜಮಣಿ ರಾಮಕುಂಜ ತ್ಯಾಜ್ಯ ನಿರ್ಮಾಣವಾಗುವ ಮತ್ತು ಅದರಿಂದಾಗುುವ ಸಮಸ್ಯೆಯ ಬಗ್ಗೆ ವಿಚಾರ ಮಂಡಿಸಿ, ವಿದ್ಯಾರ್ಥಿಗಳ ಪ್ರಶ್ನೋತ್ತರಗಳಿಗೆ ಉತ್ತರಿಸಿದರು. ಎರಡನೆ ಗೋಷ್ಠಿಯಲ್ಲಿ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಸಂಯೋಜನಾಧಿಕಾ ರಂಜನ್ ಬೆಳ್ಳರ್ಪಾಡಿ ಇವರು ತ್ಯಾಜ್ಯ ವಿಲೇವಾರಿ ಮಾಡುವ ಕ್ರಮಗಳು, ಅದರ ನಿರ್ವಹಣೆ ಮತ್ತು ಒಣ ಕಸ, ಹಸಿ ಕಸ ಮತ್ತು ಪ್ಲಾಸ್ಟಿಕ್-ಗಾಜಿನ ಕಸವನ್ನು ಬೇರ್ಪಡಿಸಿ ಅದನ್ನು ಗೊಬ್ಬರವಾಗಿ ಬಳಸುವ ರೀತಿಯನ್ನು ಪ್ರಾಯೋಗಿಕವಾಗಿ ತಿಳಿಸಿದರು. ಜೊತೆಗೆ ಸ್ವಚ್ಛತಾ ಅಭಿಯಾನದ ಜಾಗೃತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಹೇಗಿರಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು. ಈ ವಿಚಾರ ಸಂಕಿರಣದಲ್ಲಿ ಯುವ ರೆಡ್‌ಕ್ರಾಸ್ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಎಂ.ಕಾಂ. ಸ್ನಾತ್ತಕೋತ್ತರ ವಿಭಾಗದ ಒಟ್ಟು 240 ವಿದ್ಯಾರ್ಥಿಗಳು ಭಾಗವಹಿಸಿ, ಇದರ ಪ್ರಯೋಜನ ಪಡೆದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...