ಬಂಟ್ವಾಳ: ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಪ್ರಯಾಣಿಸಲು ಪ್ರಯಾಣಿಕರು ನಿಲ್ಲುವ ಬಸ್ ಬೇ ಮತ್ತು ಬಿಸಿರೋಡಿನ ಕೃಷಿ ಸಹಕಾರಿ ಬ್ಯಾಂಕ್ ನ ಕಟ್ಟಡದ ಮುಂಭಾಗದಲ್ಲಿ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನಿಂತು ಸಾರ್ವಜನಿಕರಿಗೆ ಬಹಳಷ್ಟು ತೋಂದರೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ರಾಜೇಶ್ ನಾಯ್ಕ್ ಅವರು ಮತ್ತು ಎ.ಸಿ.ರವಿಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸ್ಥಳಕ್ಕೆ ಪುರಸಭಾ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಅವರನ್ನು ಕರೆಯಿಸಿ ಸಮಸ್ಯೆ ಯನ್ನು ಬಗೆಹರಿಸುವ ನಿಟ್ಟಿನಲ್ಲಿ ನೀರು ನಿಲ್ಲದಂತೆ ಸಿಮೆಂಟ್ ಹಾಕಲು ಸೂಚನೆ ನೀಡಿದರು.
ಕಳೆದ ಮಳೆಗಾಲ ದ ವೇಳೆ ಇಲ್ಲಿ ನೀರು ನಿಂತು ಸಾರ್ವಜನಿಕರು , ಪ್ರಯಾಣಿಕರು ಅನೇಕ ತೊಂದೆರೆ ಅನುಭವಿಸಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಮಳೆ ಆರಂಭವಾಗುವ ಮೊದಲೇ ಶಾಸಕರು ಪುರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಶೀಘ್ರವಾಗಿ ಕೆಲಸ ಮಾಡುವಂತೆಯೂ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಮೇಬಲ್ ಡಿ.ಸೋಜ, ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್, ಬಂಟ್ವಾಳ ನಗರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಟ್ರಾಫಿಕ್ ಎಸ್.ಐ.ಮಂಜುನಾಥ್ ಹಾಗೂ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಗೋವಿಂದ ಪ್ರಭು, ಜನಾರ್ಧನ ಬೊಂಡಾಲ, ಸುರೇಶ್ ಕುಲಾಲ್ ,ಪವನ್, ಮಂಜು, ರಮಾನಾಥ ರಾಯಿ, ಮನೋಜ್ ಮತ್ತಿತರರು ಉಪಸ್ಥಿತರಿದ್ದರು.