Saturday, January 31, 2026

ಉಳ್ಳಾಲ ತಾಲೂಕಿಗೆ ಸೇರಲು ವಿರೋಧ

ಬಂಟ್ವಾಳ: ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ  ಉಳ್ಳಾಲ ತಾಲೂಕಿಗೆ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾ.ಪಂ.ವ್ಯಾಪ್ತಿ ಸೇರ್ಪಡೆಗೆ ಈ ಮೊದಲೇ ಆಕ್ಷೇಪ ದಾಖಲಿಸಿರುವ ಗ್ರಾ.ಪಂ.ನ ಆಡಳಿತ ಸಮಿತಿ ಇದರ ಬೆನ್ನಿಗೆ ಪುದು , ಮೇರಮಜಲು ಕೊಡ್ಮನ್ , ತುಂಬೆ ಗ್ರಾಮಗಳನ್ನು ಸೇರ್ಪಡೆಗೂ ವಿರೋಧ ವ್ಯಕ್ತವಾಗಿದೆ.
ಪುದು ಜಿಪಂ ಸದಸ್ಯ ರವೀಂದ್ರ ಕಂಬಳಿ ಅವರನ್ನೊಳಗೊಂಡ ನಿಯೋಗ ಮಂಗಳವಾರ ಜಿಲ್ಲೆಗಾಗಮಿಸಿದ ಕರ್ನಾಟಕ ಸರಕಾರದ  ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಯವರನ್ನು ಭೇಟಿಯಾಗಿ ನೂತನ ಉಳ್ಳಾಲ ತಾಲೂಕು ರಚನೆಯ ವೇಳೆ ಮೇಲೆ ಉಲ್ಲೇಖಿಸಿರುವ ಗ್ರಾಮಗಳ ಸೇರ್ಪಡೆಗೆ ಆಕ್ಷೇಪಣೆಯನ್ನು ಸಲ್ಲಿಸಿದ್ದಾರೆ. ಈ ಸಂದರ್ಭ ಹಾಜರಿದ್ದ ಸ್ಥಳೀಯ ಶಾಸಕರು,ಜಿಲ್ಲಾ ಉಸ್ತುವಾರಿಸಚಿವ ಯು.ಟಿ.ಖಾದರ್ ಅವರಿಗೂ ಆಕ್ಷೇಪ ಪತ್ರದ ಪ್ರತಿಯನ್ನು ಸಲ್ಲಿಸಿದ್ದಾರೆ.   ನಿಯೋಗದಲ್ಲಿ ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯ್ಗ , ಉಪಾಧ್ಯಕ್ಷೆ ಜಯಶ್ರೀ, ಪುದು ಪಂಚಾಯತ್ ಸದಸ್ಯ ಮನೋಜ್ ಆಚಾರ್ಯ ನಾಣ್ಯ,  ಎ  ಪಿ ಎಂ ಸಿ ಸದಸ್ಯ ವಿಠ್ಠಲ್ ಸಾಲ್ಯಾನ್. ಈ ಭಾಗದ ಪ್ರಮುಖರಾದ ದಿನೇಶ್ ಶೆಟ್ಟಿ ಕೊಟ್ಟಿಂಜ, ಪ್ರವೀಣ್ ಶೆಟ್ಟಿ, ಅಶ್ರಫ್ ಫರಂಗಿಪೇಟೆ, ಸುರೇಶ ಶೆಟ್ಟಿ ಬರ್ಕೆ , ಸುಬ್ರಮಣ್ಯ ರಾವ್ , ಅಶ್ರಫ್ ಮಾರಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.

 ಮನವಿಯಲ್ಲಿ ಏನೇನಿದೆ: ಪುದು, ಮೇರಮಜಲು, ಕೊಡ್ಮಾಣ್, ತುಂಬೆ ಗ್ರಾಮಗಳ ಸಹಿತ ಅಸುಪಾಸಿನ ಪ್ರದೇಶಗಳು ಹಲವು ವರ್ಷಗಳಿಂದ ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾದ ಬಿ.ಸಿ.ರೋಡಿನ ಅವಿಭಾಜ್ಯ ಅಂಗವಾಗಿದೆ. ಉಲ್ಲೇಖಿತ ಗ್ರಾಮಗಳ ಗ್ರಾಮಸ್ಥರ   ಕಂದಾಯ ವ್ಯವಹಾರ ಸಹಿತ ಇತರೆ ಸರಕಾರಿ ಕಚೇರಿಗಳಲ್ಲಿ ನಡೆಯುವ ಕೆಲಸ ಕಾರ್ಯಗಳು ಸಮೀಪದ ಬಿ.ಸಿ.ರೋಡಿನಲ್ಲಿ  ನಡೆದುಕೊಂಡು ಬರುತ್ತಿದೆ. ಒಂದು ವೇಳೆ ಹೊಸ ತಾಲೂಕು ರಚನೆಗಾಗಿ ಈ ಗ್ರಾಮಗಳನ್ನು ಸೇರಿಸಿಕೊಂಡರೆ ಇಲ್ಲಿನ ನಾಗರಿಕರು ತಮ್ಮ ಕಚೇರಿ ಕೆಲಸ ಕಾರ್ಯಕ್ಕೆ ನೇತ್ರಾವತಿ ನದಿಯನ್ನು ದಾಟಿ ಸುಮಾರು 35 ಕಿ.ಮೀ.ಗಿಂತಲೂ ಅಧಿಕವಾಗಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗುತ್ತದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಹಾಗೆಯೇ ಬೌಗೋಳಿಕವಾಗಿಯೂ ಈ ಗ್ರಾಮಗಳು ಬಂಟ್ವಾಳ ತಾಲೂಕಿಗೆ ಕೇಂದ್ರಿಕೃತವಾಗಿದ್ದು, ಇಲ್ಲಿನ ನಾಗರಿಕರಿಗೂ ಅನುಕೂಲಕರವಾಗಿದೆ. ಹೊಸ ತಾಲೂಕು ರಚನೆಗೆ ಜನಸಂಖ್ಯೆಯ ಅವಶ್ಯಕತೆಯಿದೆ ಎಂಬ ಕಾರಣಕ್ಕಾಗಿ ಬಂಟ್ವಾಳ ತಾ. ನಿಂದ ಪುದು, ಮೇರಮಜಲು, ಕೊಡ್ಮಾಣ್, ತುಂಬೆ ಗ್ರಾಮಗಳನ್ನು ಬೇರ್ಪಡಿಸಿ ಹೊಸ ತಾಲೂಕಿಗೆ ಸೇರಿಸಿದರೆ ಇಲ್ಲಿನ ನಾಗರಿಕರು ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಹೊಸ ತಾಲೂಕಿನ ಅಗತ್ಯವಿದ್ದಲ್ಲಿ ಜನರಬೇಡಿಕೆ, ಅನಿವಾರ್ಯತೆಯನ್ನು ಗಮನಿಸಿಕೊಂಡು ಮುಂದಡಿಡಬೇಕಾಗಿದ್ದು, ಇಲ್ಲಿ ಉಲ್ಲೇಖಿಸಿರುವ ಗ್ರಾಮಗಳ ಗ್ರಾಮಸ್ಥರು ಯಾರು ಕೂಡ ಇಂತಹ ಬೇಡಿಕೆ, ಅನಿವಾರ್ಯತೆಯನ್ನು ಮುಂದಿಟ್ಟಿಲ್ಲ. ಹಾಗಾಗಿ ಹೊಸ ಉಳ್ಳಾಲ ತಾಲೂಕು ರಚನೆಯ ವೇಳೆ ಪುದು, ಮೇರಮಜಲು, ಕೊಡ್ಮಾಣ್ , ತುಂಬೆ ಗ್ರಾಮಗಳ ಸೇರ್ಪಡೆಗೆ ಸ್ಪಷ್ಟವಾದ ವಿರೋಧವಿದ್ದು, ಈ ಗ್ರಾಮಗಳನ್ನು ಹೊಸ ತಾಲೂಕು ರಚನೆಯಿಂದ ಕೈ ಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಜೀಪನಡು ಗ್ರಾಮಸ್ಥರು ಪಂಚಾಯತ್ ಅಧ್ಯಕ್ಷ ನಾಸೀರ್ ಅವರ ನೇತೃತ್ವದಲ್ಲಿ ಸಭೆ ಸೇರಿ ಸಜೀಪನಡು ಗ್ರಾಮ ಪಂಚಾಯತ್ ವ್ಯಾಪ್ತಿ ಸೇರ್ಪಡೆಗೆ ಈ ಮೊದಲೇ ವಿರೋಧವನ್ನು ದಾಖಲಿಸಿರುವುದನ್ನು ಇಲ್ಲಿ ನೆನಪಿಸಬಹುದು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...