Thursday, February 13, 2025

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಗೆ ಕೇಂದ್ರದ ಪಾಲು ಇದೆಃ ಸಚಿವ ಜಿಗಜಿಣಗಿ

ಬಂಟ್ವಾಳ: ಕೇಂದ್ರ ಸಣ್ಣ ನೀರಾವರಿ ಸಚಿವ ರಮೇಶ್ ಜಿಗಜಿಣಗಿ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯ ವತಿಯಿಂದ 36 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ 18 ಕೋಟಿ ವೆಚ್ಚದಲ್ಲಿ ನರಿಕೊಂಬು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಯ ಕಾಮಗಾರಿ ಯನ್ನು ವೀಕ್ಷಣೆ ನಡೆಸಿದರು.
ಬಳಿಕ ಮಾತನಾಡಿದ ಅವರು ಸಂಗಬೆಟ್ಟು ಎಂಬಲ್ಲಿ ಈಗಾಗಲೇ ಪೂರ್ಣಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಹಳಷ್ಟು ಉತ್ತಮ ವಾಗಿದೆ, ಆದರೆ ಬೇಸಿಗೆ ಕಾಲದಲ್ಲಿ ಇಲ್ಲಿನ ಪಲ್ಗುಣಿ ನದಿಯಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಈ ನೀರಿನ ಸಮಸ್ಯೆ ನೀಗಿಸಲು 5 ಕೋಟಿ ವೆಚ್ಚದ ಹೊಸ ಡ್ಯಾಂ ನಿರ್ಮಾಣದ ಬೇಡಿಕೆ ಸಲ್ಲಿಕೆಯಾಗಿದೆ ಮುಂದಿನ ಬಜೆಟ್ ನಲ್ಲಿ ಹಣ ಬಿಡುಗಡೆಯಾದ ಕೂಡಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ ಎಂದರು.
ನಿರ್ಮಾಣ ಹಂತದಲ್ಲಿರುವ ನರಿಕೊಂಬು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ರುವ ಕಾಮಗಾರಿಯ ನ್ನು ಮಾರ್ಚ ಒಳಗಡೆ ಮುಗಿಸಲು ಸೂಚಿಸಿದ್ದೇನೆ.


ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯ ಸರ್ವೆ ಕಾರ್ಯ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ರಸ್ತೆಯ ಇನ್ನೊಂದು ಬದಿಯ ಹಳ್ಳಿಗಳ ಮನೆಗಳಿಗೆ ನೀರು ನೀಡಲು ಸದ್ಯಕ್ಕೆ ಸಾಧ್ಯವಿಲ್ಲ, ಹಾಗಾಗಿ ರಸ್ತೆಯ ಈ ಬದಿಯಲ್ಲಿ ಇರುವ ಹಳ್ಳಿಗಳಿಗೆ ಮಾರ್ಚ ಬಳಿಕ ನೀರು ಕೊಡುವ ವ್ಯವಸ್ಥೆ ಮಾಡಲು ತಿಳಿಸಿದ್ದೇನೆ ಎಂದು ಅವರು ಹೇಳಿದರು.
ತಪ್ಪು ತಿಳಿವಳಿಕೆ: ರಾಜ್ಯ ಸರಕಾರದ ಕುಡಿಯುವ ನೀರಿನ ಯೋಜನೆ ಗೆ ಕೇಂದ್ರ ಸರಕಾರ ಸರಿಯಾಗಿ ಅರ್ಧ ಪಾಲು ಹಣ ನೀಡುತ್ತದೆ , ಆದರೆ ರಾಜ್ಯ ಸರಕಾರ ಮಾತ್ರ ಎಲ್ಲೂ ಹೇಳದೆ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ.ಕೇಂದ್ರ ಸರಕಾರ ನೀಡುವ ಹಣದ ಬಗ್ಗೆ ಇವರಿಗೆ ಹೇಳಲು ಏನು ನಾಚಿಕೆ ಎಂದು ಪ್ರಶ್ನಿಸಿದರು.ಈ ಸಂಧರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ಜಿ.ಪಂ.ಅಧ್ಯಕ್ಷೆ ಮೀನಾಕ್ಷೀ ಶಾಂತಿಗೂಡು, ನರಿಕೊಂಬು ಗ್ರಾ.ಪಂ.ಅದ್ಯಕ್ಷ ಯಶೋಧರ, ಜಿ.ಪಂ.ಸದಸ್ಯೆ ಕಮಲಾಕ್ಷೀ ಕೆ.ಪೂಜಾರಿ, ತಾ.ಪಂ ಸದಸ್ಯ ಪ್ರಭಾಕರು ಪ್ರಭು, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಅನಂದ ಶಂಭೂರು, ಸುರೇಶ್, ರಮಾನಾಥ ರಾಯಿ, ಬಿ. ಉಶೋದ , ಕಿಶೋರ್ ಶೆಟ್ಟಿ, ಪ್ರೇಮನಾಥ್ ಶೆಟ್ಟಿ ಮತ್ತಿತರ ರು ಉಪಸ್ಥಿತರಿದ್ದರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...