Sunday, February 9, 2025

ಜುಲೈ 14: ಅಕ್ಕಮಹಾದೇವಿ ಯಕ್ಷ ಕಲಾ ಕೇಂದ್ರ ಉದ್ಘಾಟನೆ

ಬಂಟ್ವಾಳ: ಇಲ್ಲಿನ ಅಜ್ಜಿಬೆಟ್ಟಿನಲ್ಲಿರುವ ಅಕ್ಕಮಹಾದೇವಿ ಶಿಶು ಮಂದಿರದಲ್ಲಿ ಅಜ್ಜಿಬೆಟ್ಟು, ಅಗ್ರಬೈಲು, ಸಂಚಯಗಿರಿ, ಕುಲಾಲ ಮಠ, ದೈಪಲ ಭಾಗದ ಯಕ್ಷಗಾನ ಅಭಿಮಾನಿಗಳು ಸೇರಿಕೊಂಡು ಅಕ್ಕಮಹಾದೇವಿ ಯಕ್ಷ ಕಲಾ ಕೇಂದ್ರ ರಚನೆಯಾಗಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವರಾಮ್ ಜೋಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ಗಣೇಶ್ ಆಚಾರ್ಯ ಅಜ್ಜಿಬೆಟ್ಟು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಿರಿಯ ಯಕ್ಷಗಾನ ಕಲಾವಿದ ದಾಮೋದರ ಆಚಾರ್ಯ, ಯಕ್ಷನಾಟ್ಯ ಗುರುಗಳಾದ ದಯಾನಂದ ಪಿಲಿಕೂರು, ವಿಜಿತ್ ಕುಮಾರ್ ಶೆಟ್ಟಿ, ಪ್ರಗತಿಪರ ಕೃಷಿಕ ಮೋಹನ ಅಗ್ರಬೈಲು ಮತ್ತು ಸ್ನೇಹಾಂಜಲಿ ಸೇವಾ ಸಂಘದ ಅಧ್ಯಕ್ಷ ಉದಯ ಕುಮಾರ್ ಅಜ್ಜಿಬೆಟ್ಟು ಭಾಗವಹಿಸಲಿದ್ದಾರೆ. ಪ್ರತೀ ಆದಿತ್ಯವಾರ ಬೆಳಿಗ್ಗೆ ಶಿಶು ಮಂದಿರದಲ್ಲಿ ಬೆಳಿಗ್ಗೆ 8ರಿಂದ 9ರ ವರೆಗೆ ಯಕ್ಷನಾಟ್ಯ ತರಗತಿಯು ನಡೆಯಲಿದೆ ಎಂದು ಯಕ್ಷಕಲಾ ಕೇಂದ್ರದ ಕಾರ್ಯದರ್ಶಿ ಚಂದ್ರಾವತಿ ಅಜ್ಜಿಬೆಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...