Monday, January 26, 2026

ರಾಷ್ಟೀಯ ಮತದಾರ ದಿನಾಚರಣೆ

ಬಂಟ್ವಾಳ : 18 ವರ್ಷ ಪೂರ್ಣಗಳಿಸಿದ ಎಲ್ಲಾ ವಿದ್ಯಾರ್ಥಿಗಳು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಉತ್ತಮ ಸರಕಾರದ ರಚನೆ ಹಾಗೂ ಸಂವಿಧಾನ ಕರ್ತೃಗಳ ದೂರದೃಷ್ಟಿ ಈಡೇರಬೇಕಾದರೆ ಚುನಾವಣೆಯ ಪಾತ್ರ ಮುಖ್ಯ. ಅರ್ಹ ಮತದಾರರೆಲ್ಲರೂ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿ ದೇಶದ ಏಳಿಗೆಯಲ್ಲಿ ಕೈ ಜೋಡಿಸೋಣ ಎಂದು ಚುನಾವಣಾ ಸಾಕ್ಷರ ಕ್ಲಬ್‌ನ ನೋಂದಣ ಅಧಿಕಾರಿಯಾಗಿರುವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ರೂಪಾ ನುಡಿದರು
ಅವರು ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು,ಬಂಟ್ವಾಳ ರಾಷ್ಟೀಯ ಮತದಾರ ದಿನಾಚರಣೆಯ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪಾಂಶುಪಾಲರಾದ ಡಾ.ಪಾಂಡುರಂಗ ನಾಯಕ್ ಇವರು ವಹಿಸಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ಚುನಾವಣಾ ಸಾಕ್ಷರ ಕ್ಲಬ್‌ನ ಉಪಾಧ್ಯಕ್ಷೆ ತಸ್ರೀಫಾ ಮತದಾರ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಚುನಾವಣಾ ಸಾಕ್ಷರ ಕ್ಲಬ್‌ನ ಸಲಹೆಗಾರರು ಹಾಗೂ ಎಲ್ಲ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಿಶ್ಮಿತಾ ಸ್ವಾಗತಿಸಿ, ಸತೀಶ್ ವಂದಿಸಿದರು. ವಿಜೇತ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ರಾಜ್ಯಶಾಸ್ತ್ರ ಉಪನ್ಯಾಸಕಿ  ರೂಪ ಮತದಾನದ ಹಕ್ಕು ಈ ಕುರಿತಾಗಿ ಪಿ.ಪಿ.ಟಿ ಹಾಗು ವೀಡಿಯೋ ಕ್ಲಿಪಿಂಗ್ಸ್ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...