ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ಸಚಿವ ಎಚ್ ಡಿ ರೇವಣ್ಣ ಅವರು ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಕಿಲೆಂದೂರು ಅವರಿಗೆ ಅವಹೇಳನ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಸಚಿವರ ಈ ದುಂಡಾವರ್ತನೆ ಪತ್ರಕರ್ತರ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಘಟನೆ ಕುರಿತು ಸಚಿವರು ಕ್ಷಮೆ ಯಾಚಿಸಬೇಕು. ರಾಜ್ಯ ಸರಕಾರ ಮುಂದೆ ಈ ರೀತಿ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
