Monday, January 26, 2026

’ಅನುಭವ ಸವಿಯಲ್ಲ ನೆನಪು ಸಿಹಿ’ – ಸುಮತಿ ಗಜಾನನ ಪೈ

ಬಂಟ್ವಾಳ: ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಸುಪ್ತವಾದ ಮನಸ್ಸಿದ್ದು, ಆ ಮನಸ್ಸಿಗೆ ನಾವು ಯಾವ ವಿಷಯವನ್ನು ನೀಡುತ್ತೇವೆಯೋ ಅದರಂತೆ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಋಣಾತ್ಮಕ ವಿಷಯಗಳು ಮನಸ್ಸು ಮತ್ತು ವ್ಯಕ್ತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿದರೆ, ಧನಾತ್ಮಕ ವಿಷಯಗಳು ಧನಾತ್ಮಕ ಪರಿಣಾಮ ಬೀರುತ್ತದೆ ಅವರ ಅಧ್ಯಾಪನ ಸಂಧರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಅವರು ಅನುಭವಿಸಿದ ಅನುಭವಗಳೊಂದಿಗೆ ’ಅನುಭವ ಸವಿಯಲ್ಲ ನೆನಪು ಸಿಹಿ’ ಎಂದು ಉಪನ್ಯಾಸಕರೊಂದಿಗೆ ಮಹೇಶ್ ಕಾಲೇಜಿನ ಉಪನ್ಯಾಸಕಿ ಸುಮತಿ ಗಜಾನನ ಪೈ ಹಂಚಿಕೊಂಡರು.
ಅವರು ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇದರ ದಶಮಾನೋತ್ಸವ ಅಂಗವಾಗಿ ಉಪನ್ಯಾಸಕರಿಗೆ ನಡೆದ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮಾಡುವುದು ಹೇಗೆ ಎಂಬ ಕುರಿತು ಉಪನ್ಯಾಸವನ್ನು ನೀಡುತ್ತಾ ವಿದ್ಯಾರ್ಥಿಯ ಮಾನಸಿಕ ಸ್ಥಿತಿ ಅರಿವಾಗದೆ ಶಿಕ್ಷಣ ನೀಡುವುದು ಕಷ್ಟ ಸಾಧ್ಯ ವಿದ್ಯಾರ್ಥಿಯು ಶಿಕ್ಷಕರಲ್ಲಿ ಮಾತೃಸ್ವರೂಪಿ ಗುಣವನ್ನು ಕಾಣುವಂತಿರಬೇಕು ಎಂದರು.
ಈ ಸಂಧರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ರಾಷ್ಟ್ರಸೇವಿಕಾ ಸಮಿತಿಯ ಹೊಯ್ಸಳ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ ಕಮಲಾ ಪ್ರಭಾಕರ ಭಟ್, ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ, ವಿವಿಧ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ ಸ್ವಾಗತಿಸಿ, ನಿರೂಪಿಸಿ ಇಂಗ್ಲೀಷ್ ಉಪನ್ಯಾಸಕಿ ಶ್ರೀದೇವಿ ವಂದಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...