Thursday, February 13, 2025

ಎದೆಹಾಲಿಗೆ ಸಮಾನವಾದ ಆಹಾರವಿಲ್ಲ: ಧನಲಕ್ಮೀ ಸಿ.ಬಂಗೇರ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ (ರಿ.) ರೋಟರಿ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ಮಟ್ಟ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಬಿಸಿರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ತಾಯಿ ಎದೆ ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುತ್ತದೆ, ಹಾಗಾಗಿ ಮಗುವಿಗೆ ತಾಯಿ ಹಾಲಿನಷ್ಟು ಸಮಾನವಾದ ಆಹಾರ ಯಾವುದು ಇಲ್ಲ,  ಹಾಲಿನ ಮಹತ್ವದ ಬಗ್ಗೆ ತಿಳಿದು ಕೊಂಡು ಹಾರೈಕೆ ಮಾಡಿ ಎಂದು ಹೇಳಿದರು.
 ಮಹಿಳೆಯರಿಗೆ ಅತೀ ಮುಖ್ಯ ಮತ್ತು ಉತ್ತಮವಾದ ಕಾರ್ಯಕ್ರಮವನ್ನು ಇಲಾಖೆ ಮಾಡಿದೆ ಎಂದು ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ಎದೆ ಹಾಲಿಗೆ ಇರುವ ಪ್ರಾಮುಖ್ಯತೆ ಬಗ್ಗೆ ತಾಯಂದಿರು ತಿಳಿದು ಕೊಂಡಾಗ ಮಗು  ಆರೋಗ್ಯವಂತವಾಗಿರಲು ಸಾಧ್ಯವಾಗುತ್ತದೆ.
ಆರೋಗ್ಯ ಇಲಾಖೆಯ ಜೊತೆ ಇಂತಹ ಸಂಪನ್ಮೂಲ ವ್ಯಕ್ತಿಗಳ ಮಾಹಿತಿಯನ್ನು ತಾಯಂದಿರು ಪಡೆದುಕೊಂಡು ಸುಂದರ ಜೀವನ ನಡೆಸಿ ಎಂದರು.
ಇಂದಿನ ದಿನಗಳಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ಕೊಡಬೇಕಾದ ಅನಿವಾರ್ಯತೆ ಇದೆ. ರೋಗದಿಂದ ದೂರವಿರಬೇಕಾದರೆ ಸ್ವಚ್ಚತೆ ಅತೀ ಅಗತ್ಯವಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೆಣ್ಣು ಅಬಲೆಯಲ್ಲ ಸಬಲೆ, ಗಂಡು ಹೆಣ್ಣು ಎಂಬ ಬೇದಬಾವ ಇಲ್ಲದೆ ಜೊತೆಯಾಗಿ ಇದ್ದರೆ ಮಾತ್ರ ಅದು ಶ್ರೇಷ್ಠ ಎಂದು ಅವರು ಹೇಳಿದರು.
ಸ್ತನ್ಯ ಪಾನ ದ ಬಗ್ಗೆ ಮಾಹಿತಿಯನ್ನು ಡಾ| ಶಶಿಕಲಾ ಸೋಮಯಾಜಿ ಹಾಗೂ ಜಯರಾಮ ಪೂಜಾರಿ  ಡೆಂಗ್ಯೂ ಬಗ್ಗೆ  ಮಾಹಿತಿ ನೀಡಿದರು.
ವೇದಿಕೆಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ ಶಿವಾಣಿ ಬಾಳಿಗಾ, ಮಹಿಳಾ ಶಕ್ತಿ ಕೇಂದ್ರ ದ ಜಿಲ್ಲಾ  ಸಂಯೋಜಕಿ ವಿನುತಾ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ರೇವತಿ, ಸಿ.ಡಿ.ಪಿ.ಒ.ಇಲಾಖೆಯ ಮೇಲ್ವಿಚಾರಕರಾದ ನೀತಾ ಕುಮಾರಿ, ಸವಿತಾ ನವೀನ್, ಇಂದಿರಾ, ಸಾಂತ್ವನಾ ಕೇಂದ್ರದ  ಗೀತಾ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿರಿಯ ಮೇಲ್ವಿಚಾರಕಿ ಭಾರತಿ ಕುಂದರ್ ಸ್ವಾಗತಿಸಿ ದರು.
ಹಿರಿಯ ಮೇಲ್ವಿಚಾರಕಿ ಉಷಾಕುಮಾರಿ ಎಂ. ವಂದಿಸಿದರು. ಮೇಲ್ವಿಚಾರಕಿ ಸರೋಜಾ ಭಟ್ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...