ಬಂಟ್ವಾಳ: ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಈ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಂಗಳೂರು ಆಯುಕ್ತ ರವಿ ಚಂದ್ರ ನಾಯಕ್ ಹಾಗೂ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ಬೇಟಿ ನೀಡಿ ಪರಿಶೀಲನೆ ನಡೆಸಿ ದರು.
ಬಂಟ್ವಾಳ, ಬಡ್ಡಕಟ್ಟೆ, ಜಕ್ರಿಬೆಟ್ಟು, ಪಾಣೆಮಂಗಳೂರು , ಆಲಡ್ಕ, ಕಂಚಿಕಾರ್ ಪೇಟೆ ಮುಂತಾದ ಪ್ರದೇಶಗಳಿಗೆ ಬೇಟಿ ನೀಡಿ ಅಲ್ಲಿ ನ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕ ಮಾಡುವಂತೆ ತಿಳಿಸಿದರು.

ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟ 8.8 ಮೀ ಅಗಿದೆ ಎಂದು ತಹಶೀಲ್ದಾರ್ ಕಚೇರಿ ಮೂಲಗಳು ತಿಳಿಸಿದೆ.
ಮಳೆ ಕಡಿಮೆಯಾಗಿದ್ದರೂ ಕೂಡಾ ನೀರಿನ ಮಟ್ಟ ಏರಿಕೆ ಯಾಗುತ್ತಿದೆ.
ಈಗಾಗಲೇ ಶಂಭೂರು ಎ.ಎಂ.ಆರ್ ಡ್ಯಾಂ ನ 17 ಗೇಟ್ ಗಳ ತೆರವು ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ.
ಎ.ಎಂ.ಆರ್.ನ ಗೇಟ್ ತೆರವಿನ ಸಂದರ್ಭದಲ್ಲಿ ಸೈರನ್ ಮೊಳಗಿಸಲಾಗಿದೆ. ಗೇಟ್ ತೆರವಾದ ಬಳಿಕ ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಸಂಜೆಯ ವೇಳೆ ನೀರಿನ ಮಟ್ಟ ಕಡಿಮೆಯಾಗಬಹುದು ಮತ್ತೆ ರಾತ್ರಿಯ ವೇಳೆ ನೀರು ಏರಿಳಿಕೆ ಕಾಣಬಹುದು ಎಂದು ಹೇಳುತ್ತಾರೆ.
ಯಾವುದಕ್ಕೂ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಾರೆ.
ಘಟ್ಟ ಪ್ರದೇಶಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ನದಿ ತೀರದಲ್ಲಿ ವಾಸಿಸುವ ಜನರು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಹೇಳುತ್ತಾರೆ.