Thursday, January 29, 2026

ಸರಕಾರದ ಸವಲತ್ತು ಜನರಿಗೆ ಕ್ಲಪ್ತ ಸಮಯದಲ್ಲಿ ತಲುಪಿಸಿ: ಶಾಸಕ ನಾಯ್ಕ್

ಬಂಟ್ವಾಳ: ಸರಕಾರದ ಸವಲತ್ತುಗಳು ಗ್ರಾಮೀಣ ಮಟ್ಟದಲ್ಲಿ ಜನಸಮಾನ್ಯರಿಗೆ ಕ್ಲಪ್ತ ಸಮಯದಲ್ಲಿ ಅತೀ ಶೀಘ್ರವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ ಬುಧವಾರ ನಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳನ್ನು ಪಿಡಿಒಗಳು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರದ ಸವಲತ್ತನ್ನು ಅತೀ ಶೀಘ್ರವಾಗಿ ತಲುಪಿಸುವುದರ ಜೊತೆಗೆ ಗ್ರಾಮದ ಅಭಿವೃದ್ದಿಯ ನಿಟ್ಟಿನಲ್ಲು ಮುಂದಾಗಬೇಕೆಂದ ಶಾಸಕರು ಪಿಡಿಒಗಳ ಅಹವಾಲನ್ನು ಆಲಿಸಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಅವರು ಪಿಡಿಒಗಳಿಗೆ ಕಲವೊಂದು ಸಲಹೆ, ಸೂಚನೆಯನ್ನು ನೀಡಿದರು. ತಾಲೂಕಿನ ವಿವಿಧ ಗ್ರಾಮಪಂಚಾಯತ್ ನ ಪಿಡಿಒಗಳು ಹಾಜರಿದ್ದು,ತಮ್ಮ, ತಮ್ಮ ಗ್ರಾಮದಲ್ಲಾದ ಪ್ರಗತಿಯನ್ನು ಮಂಡಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...