Saturday, January 31, 2026

ಭೀಕರ ಮಳೆಯಿಂದಗುಡ್ಡ ಕುಸಿದು ಮನೆ ನಾಶ, ಮರಳಿ ಮನೆ ನಿರ್ಮಾಣದ ಭರವಸೆ ಕೊಟ್ಟ ಮಾಜಿ ಸಚಿವ ರೈ

ಬಂಟ್ವಾಳ:  ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿ ಅರ್ಧ ಕರ್ನಾಟಕ ಮುಳುಗಿ ಹೋಗಿದೆ. ವರುಣನ ಆರ್ಭಟಕ್ಕೆ ಇತ್ತ ದ.ಕ ಜಿಲ್ಲೆಯ ಬಂಟ್ವಾಳ ಹಾಗೂ ಬೆಳ್ತಂಗಡಿ ಕ್ಷೇತ್ರದ ಹಲವು ಗ್ರಾಮಗಳು ಕೊಚ್ಚಿಹೋಗಿದ್ದು , ಜಲಪ್ರಳಯ ಸಂಭವಿಸಿದೆ. ನೂರಾರು ಮನೆಗಳು ನೀರಿನಲ್ಲಿ ತೇಲಿ ಹೋಗಿದೆ. ಇನ್ನು ಬಂಟ್ವಾಳ ಕ್ಷೇತ್ರದ ಕನ್ಯಾನದಲ್ಲಿರುವ ಕರೋಪಾಡಿ ಗ್ರಾಮದ ಕರೋಪಾಡಿಯಲ್ಲಿಪ್ರವಾಹ ದಿಂದ ಐಸಮ್ಮ ಅವರ ಮನೆಯ ಹಿಂದೆ ಇದ್ದ ಗುಡ್ಡೆ ಕುಸಿದು ಮನೆ ನಾಶವಾಗಿದೆ.

ಇನ್ನು ಗುಡ್ಡ ಕುಸಿತದಿಂದ ಮನೆಯ ಸ್ಥಿತಿ ಸಂಪೂರ್ಣ ಹಾಲಾಗಿದ್ದು ಮನೆಯ ಆಸ್ತಿ ಪಾಸ್ತಿ , ಕಾರು ಪಿಕಾಪ್ ಸೇರಿದಂತೆ ಎಲ್ಲಾ ವಸ್ತುಗಳು ನಾಶವಾಗಿದೆ. ಇನ್ನು ಬಂಟ್ವಾಳ ಕ್ಷೇತ್ರದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಸಚಿವ ರೈ ಕರೋಪಾಡಿಯಲ್ಲಿರುವ ಐಸಮ್ಮರವರ ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರೈ ಮುಖ್ಯಮಂತ್ರಿ ಜೊತೆ ಮಾತನಾಡಿ ಪರಿಹಾರ ನಿಧಿಯಿಂದ ಪರಿಹಾರ ತೆಗೆಸಿಕೊಟ್ಟು ಮರಳಿ ಮನೆ ಕಟ್ಟುವ ಭರವಸೆ ಕೊಟ್ಟರು.ಈ ಸಂದರ್ಭದಲ್ಲಿ , ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮದ್,ತಾಲೂಕ್ ಪಂಚಾಯತ್ ಸದಸ್ಯರಾದ ಉಸ್ಮಾನ್ ಕರೋಪಾಡಿ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...