Friday, June 27, 2025

ಬಂಟ್ವಾಳ ಕ್ಕೆ 30 ಕೋಟಿ ರೂ. ನೀಡುವಂತೆ ಸಿ.ಎಂ.ಯಡಿಯೂರಪ್ಪ ರಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ: ರಾಜ್ಯದ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 4.30 ರ ವೇಳೆ ಬಂಟ್ವಾಳ ಕ್ಕೆ ಆಗಮಿಸಿದರು.
ಅವರು ಪಾಕೃತಿಕ ವಿಕೋಪದಲ್ಲಿ ಉಂಟಾದ ಸಮಸ್ಯೆಗಳ ಬಗ್ಗೆ ಅವಲೋಕನ ನಡೆಸಲು ಬೆಳ್ತಂಗಡಿ ತಾಲೂಕಿಗೆ ಆಗಮಿಸಿ ವಾಪಾಸು ಬರುವಾಗ ಬಂಟ್ವಾಳಕ್ಕೆ ಆಗಮಿಸಿದರು.
ಬಂಟ್ವಾಳ ತಾಲೂಕಿನ ಲ್ಲಿ ನೆರೆಯಿಂದ ಹಾನಿಯಾದ ಸಂಪೂರ್ಣ ಮಾಹಿತಿ ಯನ್ನೊಳಗೊಂಡ ಮನವಿ ಹಾಗೂ 30ಕೋಟಿ ರೂಗಳನ್ನು ಪರಿಹಾರ ನೀಡುವಂತೆ ಮನವಿ ಮಾಡಿದರು.


ಬಳಿಕ ಮಾತನಾಡಿ ದ ಸಿ.ಎಂ. ಪಾಕೃತಿಕ ಹಾನಿಗೆ ನೀಡುತ್ತಿದ್ದ 95 ಸಾವಿರ ರೂಗಳನ್ನು ಈ ಬಾರಿ 5 ಲಕ್ಷ ರೂ ನೀಡುತ್ತೇವೆ.
ನೆರೆಯಿಂದ ಮುಳುಗಡೆಯಾದ ಅಂಗಡಿಗಳಿಗೆ ರೂ 5 ಸಾವಿರ ನೀಡುತ್ತೇವೆ, ಮನೆ ರಿಪೇರಿ ಮಾಡಲು 1 ಲಕ್ಷ ರೂ ನೀಡುತ್ತೇವೆ. ನೆರೆಯಿಂದ ಸಂಪೂರ್ಣ ಹಾನಿಯಾದ ಮನೆಗಳ ಕುಟುಂಬ ಹೊಸಮನೆ ನಿರ್ಮಾಣ ದ ವರೆಗೆ ಅವರ ಮನೆಯ ಬಾಡಿಗೆ ತಿಂಗಳಿಗೆ ರೂ5 ಸಾವಿರ ನೀಡುತ್ತೇವೆ ಎಂದ ಅವರು ಯಾವುದೇ ರೀತಿಯ ಭಯ ಬೇಡ ನಿಮ್ಮ ಜೊತೆ ಸರಕಾರ ಇದೆ ಎಂದು ಅವರು ಅಭಯ ನೀಡಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಎಂ.ಎಲ್.ಸಿ.ಕೋಟಶ್ರೀನಿವಾಸ ಪೂಜಾರಿ, ಶಾಸಕ ಸಂಜೀವ ಮಠಂದೂರು, ವೇದವ್ಯಾಸ ಕಾಮತ್ ಪ್ರಮುಖ ರಾದ ದೇವದಾಸ ಶೆಟ್ಟಿ, ಎಂ.ತುಂಗಪ್ಪ ಬಂಗೇರ, ಮಾಜಿ ಶಾಸಕ ರುಕ್ಮಯ ಪೂಜಾರಿ, ಎ.ಗೋವಿಂದ ಪ್ರಭು, ದಿನೇಶ್ ಅಮ್ಟೂರು, ಉದಯಕುಮಾರ್ ರಾವ್, ದಿನೇಶ್ ಭಂಡಾರಿ, ಮೋನಪ್ಪ ದೇವಶ್ಯ, ರಾಮ್ ದಾಸ ಬಂಟ್ವಾಳ, ರೋನಾಲ್ಡ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...