Wednesday, June 25, 2025

ನೆರೆ ಸಂತ್ರಸ್ತರಿಂದ ಊಟೋಪಚಾರಕ್ಕೆ ಬೇಡಿಕೆ, ನಿಂದನೆ: ಆರೋಪ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿ.ಮೂಡ ಗ್ರಾಮಕರಣಿಕರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಊಟೋಪಚಾರಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ನೆರೆ ಸಂತ್ರಸ್ತರೊಬ್ಬರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.


ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ನೆರೆ ಸಂತ್ರಸ್ತ ಲತೀಫ್ ಬಿ.ಸಿ. ಎಂಬವರು ಈ ದೂರು ನೀಡಿದ್ದು, ಕಳೆದ ವಾರದಿಂದ ಭಾರೀ ಮಳೆಯಿಂದಾಗಿ ನೆರೆ ಬಂದು ತನ್ನ ಮನೆ ಸಹಿತ ಸುತ್ತಮುತ್ತಲಿನ ಮನೆಗಳೂ ಜಲಾವೃತಗೊಂಡಿತ್ತು. ಈ ನಿಟ್ಟಿನಲ್ಲಿ ಆ. 12ರಂದು ಬೆಳಿಗ್ಗೆ 11.30ಗಂಟೆ ಸುಮಾರಿಗೆ ಗ್ರಾಮಕಣಿಕರು ಹಾಗೂ ಇತರ ಸಿಬ್ಬಂದಿ ತಲಪಾಡಿ ಪ್ರದೇಶದ ನೆರೆ ಸಂತ್ರಸ್ತರ ಸರ್ವೇ ಕಾರ್ಯಕ್ಕಾಗಿ ತಮ್ಮ ಮನೆಗೆ ಬಂದು ಅಜಿಗಳನ್ನು ಭರ್ತಿ ಮಾಡಿದ್ದಾರೆ. ಆದರೆ, ಅಂದು ರಾತ್ರಿ 10.15ಗಂಟೆ ಸುಮಾರಿಗೆ ವಿಎಯ ಹೆಸರಿನಲ್ಲಿ 8618461060 ಮೊಬೈಲ್ ನಂಬರ್‌ನಿಂದ ತನಗೆ ಕರೆ ಮಾಡಿ, “ನೆರೆ ಬಂದ 14 ಮನೆಗಳಿಗೆ ಸರ್ವೇ ಮಾಡಲು ನಮಗೆ ನೀನು ಉಪಚರಿಸಿಲ್ಲ. ಅದಲ್ಲದೆ, ಕುಡಿಯಲು ಕೊಡಲು ಯೋಗ್ಯತೆ ಇಲ್ಲ. ನಿನಗೆ ಅಹಂಕಾರ ಇದೆ ಎಂದೇಳಿ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇದರಿಂದ ಗೊಂದಲಗೊಂಡ ತಾನು ಈ ವಿಚಾರವಾಗಿ ಮತ್ತೆ ಅದೇ ನಂಬರ್‌ಗೆ ಕರೆ ಮಾಡಿದ್ದು, ಕರೆಯನ್ನು ನಿರಾಕರಿಸಿದ್ದಾರೆ. ನೆರೆಯಿಂದ ತನ್ನ ಮನೆ ಅವ್ಯವಸ್ಥೆಯಿಂದ ಕೂಡಿದ್ದು, ಶುಚಿ ಕಾರ್ಯವನ್ನು ಇನ್ನೂ ಮಾಡಿಲ್ಲ. ತಾನು ತನ್ನ ಕುಟುಂಬವು ಸಂಬಂಧಿಕರ ಮನೆಯಲ್ಲಿ ವಾಸವಾಗಿ ಅಲ್ಲಿಯೇ ಹಬ್ಬವನ್ನು ಮಾಡಿರುತ್ತೇವೆ, ಈಗಿರುವಾಗ ತಾನು ಇವರಿಗೆ ಹೇಗೆ ಊಟೋಪಚಾರ ಮಾಡಲಿ?. ಇದರಿಂದ ನೆರೆ ಸಂತ್ರಸ್ತನಾದ ತಾನು ಮಾನಸಿಕವಾಗಿ ನೊಂದುಕೊಂಡಿದ್ದೇನೆ. ಆದ್ದರಿಂದ ತಾವು ಈ ಬಗ್ಗೆ ವಿಚಾರಣೆ ಮಾಡಿ ನ್ಯಾಯ ಒದಗಿಸಬೇಕಾಗಿ ಪೊಲೀಸ್ ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

More from the blog

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ- ರಾಜೇಶ್ ಬಿ

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ...