Wednesday, February 12, 2025

ಬಾಲ ಸಂರಕ್ಷಣಾ ಕೇಂದ್ರದಲ್ಲಿ ಸ್ವಾತಂತ್ರ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

ಬಂಟ್ವಾಳ: ಫರಂಗಿಪೇಟೆ  ಟೀಮ್ ವೀರಾಂಜನೇಯ ತಂಡದ  ವತಿಯಿಂದ 73ನೇ ಸ್ವಾತಂತ್ರ ದಿನಾಚರಣೆ ಹಾಗೂ ರಕ್ಷಾ ಬಂಧನ  ಕಾರ್ಯಕ್ರಮವು ಮಂಗಳೂರು ತಾ.ನ ತೊಕ್ಕೊಟ್ಟು ಸಮೀಪದ ಕುತ್ತಾರ್  ಬಾಲಸಂರಕ್ಷಣಾ ಕೇಂದ್ರದಲ್ಲಿ  ಆಚರಿಸಲಾಯಿತು.    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ಸಂರಕ್ಷಣಾ ಕೇಂದ್ರ ಕುತ್ತಾರ್ ಸಂಚಾಲಕರಾದ ಬಾಲಕೃಷ್ಣ ಭಟ್ ವಹಿಸಿದ್ದರು.

 ಆಶ್ರಮದ ಸಂಚಾಲಕರದಂತಹ ಡಾ. ಅನಂತ ಕೃಷ್ಣ ಭಟ್ ರಕ್ಷಾ ಬಂಧನದ ಮಹತ್ವವನ್ನು ತಿಳಿಸಿದರು.

 ಬಾಲಸಂರಕ್ಷಣಾ ಕೇಂದ್ರದಲ್ಲಿರುವ  ಅರುಣಚಲ್ ಪ್ರದೇಶ್,  ಮೇಘಾಲಯ,  ಪಶ್ಚಿಮ ಬಂಗಾಳ,  ಉತ್ತರ ಪ್ರದೇಶ,  ಕರ್ನಾಟಕ,  ಕೇರಳ ಹಾಗೂ ಇನ್ನಿತರ ರಾಜ್ಯಗಳ ಬಾಲಕ-ಬಾಲಕಿಯರ ರಕ್ಷಣೆ ಹಾಗೂ ಸಂರಕ್ಷಣೆಗೆ ನಾವು ಸದಾ ಬದ್ಧ ಎಂಬ  ಆಶಯದಿಂದ ರಕ್ಷಾಬಂಧನವನ್ನು ಬಾಲಕ-ಬಾಲಕಿಯರಿಗೆ ಹಾಗೂ ತಂಡದ ಸದಸ್ಯರು ಪರಸ್ಪರ ಕಟ್ಟಿಸಿಕೊಂಡು ಮಕ್ಕಳಿಗೆ ಫಲವಸ್ತುಗಳನ್ನು ವಿತರಿಸಿ ವಿಶಿಷ್ಟರೀತಿಯಲ್ಲಿ ರಕ್ಷಾ ಬಂಧನಕಾರ್ಯಕ್ರಮವನ್ನು ಆಚರಿಸಲಾಯಿತು.

 ಅರ್ಕುಳ ಗ್ರಾಮ ಪಂಚಾಯತ್ ನ ಸದಸ್ಯರಾದ ಸುಕುಮಾರ್ ಕರ್ಕೇರ, ಪ್ರಶಾಂತ್ ಪೂಜಾರಿ, ಲೋಹಿತ್ ಕರ್ಕೇರಾ ತಂಡದ ಮಹಿಳಾ ಸದಸ್ಯೆ  ಮಮತಾ ಕುತ್ತಾರು,ಚೈತ್ರಾಂಜಲಿ ,ಸ್ವಾತಿ , ಕಾವ್ಯ ಹಾಗು ತಂಡದಸದಸ್ಯರು ಉಪಸ್ಥಿತರಿದ್ದರು. ಮನ್ವಿತ್ ಕರ್ಕೇರ ಕಾರ್ಯ ಕ್ರಮ ನಿರೂಪಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...