ಬಂಟ್ವಾಳ: ಅತ್ಯಾಚಾರ ಪ್ರಕರಣವೊಂದರ ಆರೋಪಿಯೋರ್ವನ ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಬಂಟ್ವಾಳ ವ್ರತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಸಾರ್ವಜನಿಕ ರಲ್ಲಿ ವಿನಂತಿ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಸಮೀಪ ದ ಮಲಾಬೆ ನಿವಾಸಿ ಬೇಬಿ ಮುಗೇರ ಅವರ ಪುತ್ರ ರವೀಂದ್ರ (35) ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅತ್ಯಾಚಾರ ಪ್ರಕರಣವೊಂದರ ಆರೋಪಿಯಾಗಿದ್ದು ಸುಮಾರು ೧ ವರ್ಷದಿಂದ ತಲೆಮರೆಸಿಕೊಂಡಿರುತ್ತಾನೆ. ಈತನು ಎಲ್ಲಿಯಾದರು ಕಾಣಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಪೊಲೀಸ್ ವೃತ್ತ ನಿರೀಕ್ಷಕರು ಬಂಟ್ವಾಳ ವೃತ್ತರವರಿಗೆ ಕೂಡಲೇ ಮಾಹಿತಿ ನೀಡುವಂತೆ ಈ ಮೂಲಕ ಕೋರಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ: 08255-235000
ಪೊಲೀಸ್ ಉಪನಿರೀಕ್ಷಕರು ಬಂಟ್ವಾಳ ಗ್ರಾಮಾಂತರ ಠಾಣೆ: 9480805368
ಪೊಲೀಸ್ ವೃತ್ತ ನಿರೀಕ್ಷಕರು ಬಂಟ್ವಾಳ ವೃತ್ತ : 9480805335
ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್: 0824-2220508