Monday, January 26, 2026

ಟ್ರಾಫಿಕ್ ಎಸ್.ಐ.ಮಂಜುನಾಥ್ ಅವರಿಗೆ ಬೀಳ್ಕೊಡುಗೆ

ಬಂಟ್ವಾಳ: ಬೆಂಗಳೂರು ಸಿ‌.ಐ.ಡಿ ವಿಭಾಗಕ್ಕೆ ಪೋಲೀಸ್ ನಿರೀಕ್ಷಕರಾಗಿ ಪದೋನ್ನತಿಗೊಂಡು ವರ್ಗಾವಣೆ ಅಗಿರುವ ಬಂಟ್ವಾಳ ಟ್ರಾಫಿಕ್ ಎಸ್.ಐ. ಮಂಜುನಾಥ್ ಅವರ ಬೀಳ್ಕೊಡುಗೆ ಕಾರ್ಯಕ್ರಮ ಮೆಲ್ಕಾರ್ ನ ಹೊಟೇಲೊಂದರಲ್ಲಿ ನಡೆಯಿತು.
ಈ ಕಾರ್ಯಕ್ರಮದ ಆಧ್ಯಕ್ಷತೆವಹಿಸಿದ್ದ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ ಅವರು ಮಾತನಾಡಿ ಮಂಜುನಾಥ್ ಅವರು ಒಬ್ಬ ದಕ್ಷ ಅಧಿಕಾರಿಯಾಗಿದ್ದರು.
ಬಂಟ್ವಾಳ ಟ್ರಾಫಿಕ್ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಯ ಮೂಲಕ ಟ್ರಾಫಿಕ್ ಅವ್ಯಸ್ಥೆಗಳನ್ನು ಸರಿಪಡಿಸಿ ಜನಸಾಮಾನ್ಯರಿಗೆ ನೆರವಾಗಿದ್ದರು ಎಂದು ಅವರು ಹೇಳಿದರು.
ಕಾನೂನು ಸರಿಯಾಗಿ ಪಾಲನೆಯಾದಾಗ ಸಂಚಾರಿ ನಿಯಮಗಳು ಕಷ್ಟವಲ್ಲ ಎಂದು ಅವರು ಹೇಳಿದರು.  ಪ್ರತಿಯೊಂದು ನಿಯಮಗಳ ಆರಂಭದಲ್ಲಿ ಕಷ್ಟ ವಾಗುತ್ತದೆ ಆದರೆ ಪ್ರತಿಯೊಬ್ಬರು ಪಾಲಿಸಿದಾಗ ಅಂತಹ ಸಮಸ್ಯೆಗಳು ಉದ್ಬವವಾಗುವುದಿಲ್ಲ ಎಂದು ಅವರು ಹೇಳಿದರು. ‌
ಮುಖ್ಯ ಅತಿಥಿಯಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್ ಮಾತನಾಡಿ ಸರಕಾರಿ ಕೆಲಸದಲ್ಲಿ ಪದೋನ್ನತಿ ಎಂಬುದು ಸುವರ್ಣವಕಾಶ. ಮಾನವೀಯ ಮೌಲ್ಯಗಳನ್ನು ಹೊಂದಿರುವ ಕೆಲಸಗಳು ಪೋಲೀಸ್ ಇಲಾಖೆಯಿಂದ ಹೆಚ್ಚು ಹೆಚ್ಚು ನಡೆದಾಗ ಮಾತ್ರ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಅಂತಹ ಕೆಲಸ ಮಡಿಕೇರಿಯ ಜೋಡುಪಾಲದಲ್ಲಿ ಮಂಜುನಾಥ್ ಎಸ್.ಐ.ಮಾಡಿದ್ದಾರೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಬಂಟ್ವಾಳ ನಗರ ಠಾಣಾ  ಎಸ್.ಐ. ಚಂದ್ರಶೇಖರ್, ವಿಟ್ಲ ಎಸ್.ಐ. ಯಲ್ಲಪ್ಪ, ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ
ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ಟ್ರಾಫಿಕ್ ಎಸ್.ಐ. ರಾಮ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಿಬ್ಬಂದಿ ವಿವೇಕ್ ವಂದಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...