Sunday, January 25, 2026

ಅವಕಾಶ ಬಳಸಿ-ಪ್ರತಿಭೆ ಬೆಳಗಿಸಿ : ಬಿ.ರಾಮಚಂದ್ರ ರಾವ್ ಕರೆ

ಬಂಟ್ವಾಳ: ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ವಿಸ್ತಾರಗೊಳಿಸಬೇಕು ಎಂದು ನಿವೃತ್ತ ಶಿಕ್ಷಕ, ಕಾರ್ಯಕ್ರಮ ಉದ್ಘೋಷಕ ಬಿ.ರಾಮಚಂದ್ರ ರಾವ್ ಹೇಳಿದರು.
ನಮ್ಮ ಬಂಟ್ವಾಳ ವೆಬ್ ನ್ಯೂಸ್ ವತಿಯಿಂದ ಗಣೇಶ ಚತುರ್ಥಿಯ ಅಂಗವಾಗಿ ಏರ್ಪಡಿಸಲಾಗಿದ್ದ ನಮ್ಮ ಗಣಪ ಗಣೇಶ ಚಿತ್ರರಚನಾ ಸ್ಪರ್ಧೆಯ ಬಹುಮಾನ ವಿತರಿಸಿ ಮಾತನಾಡಿದರು.

 

ವಿದ್ಯಾರ್ಜನೆಯ ಸಂದರ್ಭ ಹಲವಾರು ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ, ಆದರೆ ಅವಕಾಶಗಳನ್ನು ಕೈ ಚೆಲ್ಲಿದರೆ ಅದು ನಮ್ಮ ಏಳಿಗೆಗೆ ಹಿನ್ನಡೆಯಾಗುತ್ತದೆ ಎಂದ ಅವರು, ಬದುಕಿನಲ್ಲಿ ಕಾಣುವ ಸೋಲನ್ನೂ ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು. ನಮ್ಮ ಪ್ರತಿಭೆ ಮತ್ತಷ್ಟು ಮಂದಿಗೆ ಪ್ರೇರಣೆಯಾಗಲಿ ಎಂದರು. ನಮ್ಮ ಗಣಪ ನ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ರಚನಾ ಸ್ಪರ್ಧೆ ಏರ್ಪಡಿಸಿದ ನಮ್ಮ ಬಂಟ್ವಾಳ ಸಂಸ್ಥೆಯನ್ನು ಅಭಿನಂದಿಸಿದ ಅವರು, ಇಂತಹ ಪ್ರೇರಣೆಯ ಕಾರ್ಯ ಇನ್ನೂ ಮುಂದುವರಿಯಲಿ ಎಂದರು.

ಓಂ ಪವರ್ ಟರ್ಮಿನರ್ಸ್ ನ ಮಾಲಕ, ಉದ್ಯಮಿ ಓಂ ಪ್ರಸಾದ್, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಮ್ಮ ಬಂಟ್ವಾಳ ವೆಬ್ ನ್ಯೂಸ್ ನ ಸಂಪಾದಕ, ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಅತಿಥಿಗಳನ್ನು ಸ್ವಾಗತಿಸಿದರು. ಪತ್ರಕರ್ತ ಮೌನೇಶ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...