Monday, January 26, 2026

ರೋಗಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ್ ಶೆಟ್ಟಿ ಕಾವು

ಬಂಟ್ವಾಳ: ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ ದ ರೋಗಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ್ ಶೆಟ್ಟಿ ಕಾವು.

ಅವರು ಬುಧವಾರ ಬೆಳಿಗ್ಗೆ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎಂ.ಆರ್.ಪಿ.ಎಲ್ ವತಿಯಿಂದ ನಾಲ್ಕು ತಾಲೂಕಿನ ಸರಕಾರಿ ಆಸ್ಪತ್ರೆ ಗಳಿಗೆ ನಾಲ್ಕು ಅಂಬ್ಯುಲೆನ್ಸ್ ಗಳನ್ನು ನೀಡುವ ಕಾರ್ಯಕ್ರಮ ದಲ್ಲಿ ಭಾಗವಹಸಿ ಬಳಿಕ ಆಸ್ಪತ್ರೆ ಯಲ್ಲಿನ ವ್ಯವಸ್ಥೆ ಗಳ ಬಗ್ಗೆ ಮಾಹಿತಿ ಪಡೆದರು, ಹಾಗೂ ಪ್ರತಿ ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಜಿ‌.ಪಂ.ಸದಸ್ಯ ರಾದ ಎಂ.ಎಸ್.ಮಹಮ್ಮದ್, ಮಂಜುಳಾ ಮಾದವ ಮಾವೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...