Friday, January 30, 2026

ಮನೆಗೆ ನುಗ್ಗಿ ದಂಪತಿಗೆ ಹಲ್ಲೆ: ಸ್ಥಳಕ್ಕೆಎಸ್.ಪಿ. ಭೇಟಿ ಆರೋಪಿಗಳ ಶೀಘ್ರ ಬಂಧನದ ಭರವಸೆ

ಬಂಟ್ವಾಳ: ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅತನ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನಾ ಸ್ಥಳಕ್ಕೆ ಎಸ್.ಪಿ.ಲಕ್ಮೀಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಶೀಘ್ರವಾಗಿ ಆರೋಪಿಗಳ ಪತ್ತೆಗೆ ಕ್ರಮಕೈಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಸ್.ಪಿ.ಜೊತೆಯಲ್ಲಿ ಅಡಿಷನಲ್ ಎಸ್.ಪಿ.ವಿಕ್ರಮ್ ಅಮ್ಟೆ, ಎ.ಎಸ್.ಪಿ.ಸೈದುಲು ಅಡಾವತ್, ಬೆರಳಚ್ಚು ವಿಭಾಗದ ಅಧಿಕಾರಿ ಹಾಗೂ ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಘಟನೆಯ ವಿವರ :
ಪತಿ ಪತ್ನಿ ಇಬ್ಬರಿಗೆ ತಂಡವೊಂದು ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೇರೆಮಜಲು ಎಂಬಲ್ಲಿ ಇಂದು ಮುಂಜಾನೆ ವೇಳೆ ನಡೆದಿತ್ತು.

ಮೇರೆಮಜಲು ನಿವಾಸಿ ಪಂಚಾಯತ್ ಸದಸ್ಯ ಯೋಗೀಶ್ ಪ್ರಭು ಮತ್ತು ಆತನ ಪತ್ನಿ ಶೋಭಾ ಅವರು ಗಾಯಗೊಂಡವರು.

ಮುಂಜಾನೆ ಸುಮಾರು 4 ಗಂಟೆಯ ವೇಳೆ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೇರಮಜಲು ನಿವಾಸಿ ರೌಡಿಶೀಟರ್ ಪ್ರಸಾದ್ ಬೆಳ್ಚಾಡ ಮತ್ತು ಆತನ ಜೊತೆ ಇಬ್ಬರು ಸ್ನೇಹಿತರು ಸೇರಿ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಯೋಗೀಶ್ ಪ್ರಭು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ಗೆ ದೂರು ನೀಡಿದ್ದಾರೆ.
ಮುಂಜಾನೆ 4 ಗಂಟೆಯ ವೇಳೆ ಪ್ರಸಾದ್ ಬೆಳ್ಚಾಡ ಮತ್ತು ಅತನ ಇಬ್ಬರು ಸ್ನೇಹಿತರು ಯೋಗೀಶ್ ಪ್ರಭು ಅವರ ಮನೆಗೆ ಬಂದು ಬಾಗಿಲು ಬಡಿದು ಎಚ್ಚರಿಸಿ ಬಾಗಿಲು ತೆರೆಯುವಂತೆ ಕೇಳಿಕೊಂಡಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆ ಮನೆಯೊಳಗೆ ನುಗ್ಗಿ ಏಕಾಏಕಿ ತಲವಾರಿನಿಂದ ಯೋಗೀಶ್ ಪ್ರಭು ಮೇಲೆ ಪ್ರಶಾದ್ ಬೆಳ್ಚಾಡ ಹಲ್ಲೆ ನಡೆಸಿದ್ದಾನೆ ಈ ಸಂದರ್ಭದಲ್ಲಿ ಜೊತೆಯಲ್ಲಿದ್ದ ಪತ್ನಿ ಶೋಭಾ ಅವರಿಗೂ ಗಾಯಗಳಾಗಿವೆ.

ಗ್ರಾಮ ಪಂಚಾಯತ್ ಸದಸ್ಯನಿಗೆ ಹಾಗೂ ಆತನ ಪತ್ನಿಗೆ ಮನೆಗೆ ನುಗ್ಗಿ ತಲವಾರಿನಿಂದ ಮಾರಣಾಂತಿಕ ಹಲ್ಲೆ

ವೈಯಕ್ತಿಕ ಹಳೆಯ ದ್ವೇಷ ಕಾರಣ?: 
ಈ ಹಲ್ಲೆಗೆ ಹಳೆಯ ವೈಯಕ್ತಿಕ ದ್ವೇಷವೇ ಕಾರಣವಾಗಿರಬಹುದು ಎಂಬುದನ್ನು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂದಿಸಿದಂತೆ ಪ್ರಸಾದ್ ಬೆಳ್ಚಾಡ ಅವರ ಹೆಸರನ್ನು ಯೋಗೀಶ್ ಪ್ರಭು ಅವರು ದುರ್ಬಳಕೆ ಮಾಡಿ ಠಾಣೆಗೆ ದೂರು ನೀಡಿದ್ದಾರೆ ಎಂದು ಅವರು ಕೆಲ ವರ್ಷಗಳ ಹಿಂದೆ ಹಲ್ಲೆ ನಡೆಸಿದ್ದ . ಈ ಬಗ್ಗೆ ಯೂ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿತ್ತು.
ಆ ಬಳಿಕವೂ ಇವರ ಮಧ್ಯೆ ದ್ವೇಷದ ಕಿಡಿ ಹಾರಿರಲಿಲ್ಲ. ಮತ್ತೆ ಅದೇ ವೈಯಕ್ತಿಕ ಹಳೆಯ ದ್ವೇಷ ವೇ ಈ ಹಲ್ಲೆಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ.

ಆರೋಪಿಗಳ ಪತ್ತೆಗೆ ತಂಡ ಕಾರ್ಯಪ್ರವೃತ್ತ:
ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಎಸ್.ಐ. ಪ್ರಸನ್ನ ಅವರ ತಂಡ ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...