ಬಂಟ್ವಾಳ: ಆಧಾರ್ ಕೇಂದ್ರಗಳನ್ನು ಗ್ರಾಮ ಮಟ್ಟದಲ್ಲಿ ತೆರೆಯಬೇಕು ಹಾಗೂ ಆಧಾರ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು ಸರಳೀಕರಿಸಲು ಆಗ್ರಹಿಸಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಉಪ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಡಿ.ವೈ.ಎಫ್.ಐ, ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ಮುಖಂಡರಾದ ಸಾಧಿಕ್ ಬಂಟ್ವಾಳ, ಶೌಕತ್ ಆಲಿ ಖಾನ್, ಸಾಮಾಜಿಕ ಕಾರ್ಯಕರ್ತರಾದ ಸಮದ್ ಬಿ.ಸಿ.ರೋಡ್, ಇಸ್ಮಾಯಿಲ್ ಅರಬಿ ಬಂಟ್ವಾಳ ಉಪಸ್ಥಿತರಿದ್ದರು.


