Monday, January 26, 2026

ಒಡಿಯೂರು ಗುಡ್ಡ ಕುಸಿತ: ಪರಿಹಾರ ಚೆಕ್‌ ವಿತರಿಸಿದ ಬಂಟ್ವಾಳ ಶಾಸಕರು

ಬಂಟ್ವಾಳ: ಇತ್ತೀಚೆಗೆ ಕರೋಪಾಡಿ ಗ್ರಾಮದ ಒಡಿಯೂರು ಗುಡ್ಡ ಕುಸಿತದಿಂದ ಮೃತಪಟ್ಟವರಿಗೆ ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಹಾರ ನೀಡಲು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನವಿ ಮಾಡಿದ್ದು ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳ ವೇದಿಕೆಯಲ್ಲಿ ಪರಿಹಾರ ಘೋಷಿಸಿದ್ದು ಅದರಂತೆಯೇ ಅವಘಡದಲ್ಲಿ ಮೃತಪಟ್ಟ ವಿಟ್ಲಪಡ್ನೂರು ಗ್ರಾಮದ ಕಾಪುಮಜಲು ನಿವಾಸಿಯಾದ ರಮೇಶ್ ಮಡಿವಾಳ ಎಂಬವರ ಪತ್ನಿ ಮೋಹಿನಿಯವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 3 ಲಕ್ಷದ ಪರಿಹಾರದ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು. ಗಾಯಾಳುಗೆ ರೂ.1 ಲಕ್ಷ ಚೆಕ್‌ನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ವಿಟ್ಲಪಡ್ನೂರು ಪಂ.ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರಾದ ನಾಗೇಶ್ ಶೆಟ್ಟಿ, ಅಭಿಷೇಕ್ ರೈ, ಕಂದಯ ನಿರೀಕ್ಷಕರಾದ ದಿವಾಕರ್, ವಿಶ್ವನಾಥ ಉಪಸ್ಥಿತರಿದ್ದರು.

 

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...