Monday, February 2, 2026

ತಾಲೂಕಿನಲ್ಲಿ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಮಲ್ಲಿಕಾ ಶೆಟ್ಟಿ

ಬಂಟ್ವಾಳ: ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಮಲ್ಲಿಕಾ ಶೆಟ್ಟಿ ವಿ.ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿ ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಪ್ರಸ್ತುತ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ. ತಾಲೂಕಿನಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಿಳಾ ಅಧ್ಯಕ್ಷೆಯಾಗಿ ಇದೇ ಪ್ರಥಮವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ರಾಗಿ ಅಲ್ವಿನ್ ವಿನಯ್ ಲೊಬೋ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ನರಸಿಂಹ ಹೊಳ್ಳ, ಪದ್ಮನಾಭ ರಾವ್ ಕನಪಾಡಿ, ಬಿ.ಸುರೇಶ್ ಭಂಡಾರಿ ಅರ್ಬಿ, ಕಮಲಾಕ್ಷ ಪ್ಲೋಸಿ ಡಿ.ಸೋಜ, ರಮೇಶ್, ಶಿವಪ್ರಸಾದ್ ಕನಪಾದೆ, ಅನಿಲ್ ಪಿಂಟೋ, ಪೂರ್ಣಿಮ ಕೆಂಪುಗುಡ್ಡೆ, ಪೂರ್ಣಿಮಾ ಬೆದ್ರಗುಡ್ಡೆ, ತೋಮಸ್ ಸಲ್ದಾನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಕಾರಿ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್ ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಜಯ್ ಕುಮಾರ್ ಅಜಿಲ ಸಹಕರಿಸಿದರು.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...