Sunday, July 13, 2025

ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಪುನಃ ಪ್ರತಿಷ್ಠೆ ನಡೆಸಲು ನಿರ್ಧಾರ

ಬಂಟ್ವಾಳ: ಶಿಥಿಲಾವಸ್ಥೆಯಲ್ಲಿರುವ ಬಂಟ್ವಾಳ ಕಸ್ಬಾ ಗ್ರಾಮದ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ನೂತನ ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಮೇ ಅಂತ್ಯದ ವೇಳೆಗೆ ಪುನಃ ಪ್ರತಿಷ್ಠೆ ನಡೆಸಲು ಸಿದ್ದತೆ ನಡೆಸುತ್ತಿದ್ದು ಊರ ಪರಊರ ಜನರ ಸಹಕಾರ ಬೇಕು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್ ಮಡಿವಾಳಬೆಟ್ಟು ಹೇಳಿದರು.

ಅವರು ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸುಮಾರು 2.5 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

ಕಾಪು ಕ್ಷೇತ್ರದಿಂದ ಬಂದ ಶಕ್ತಿ ಇಲ್ಲಿ ನೆಲೆಯಾಗಿದೆ ಎಂಬುದಕ್ಕೆ ಪ್ರತೀತಿ ಇದೆ. ಜನರ ಸಂಕಷ್ಟಗಳನ್ನು ಪಾರು ಮಾಡಲು ಇಲ್ಲಿ ಪ್ರಾರ್ಥನೆ ಮಾಡಿ ಪೂಜೆ ಸಲ್ಲಿಸಿದರೆ ಸಾಕು, ಇಷ್ಟಾರ್ಥಗಳು ನೆರೆವೆರಿದಕ್ಕೆ ಅನೇಕ ನಿರ್ದೇಶನಗಳಿವೆ. ಸಾಂಕ್ರಾಮಿಕ ರೋಗಗಳ ನಿವಾರಣೆಗೆ ಇಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ನೂರಾರು ವರ್ಷಗಳ ಇತಿಹಾಸವಿರುವ ಈ ಕ್ಷೇತ್ರದಲ್ಲಿ ಮಹಾಮ್ಮಾಯಿ ಜೊತೆಯಲ್ಲಿ ಗಣಪತಿ , ಶ್ರೀ ಗುರು, ಶ್ರೀ ನಾಗಬ್ರಹ್ಮ, ರಕ್ತೇಶ್ವರಿ, ಗುಳಿಗ, ಮಹಮ್ಮಾಯಿ ಗುಳಿಗ, ಕಾಲಭೈರವ, ಕಲ್ಲುರ್ಟಿ, ಪಂಜುರ್ಲಿ, ಧೂಮಾವತಿ ಬಂಟ, ಮಾಡಕೊರತಿ, ಕುಪ್ಪೆಟ್ಟು ಪಂಜುರ್ಲಿ, ಮಂತ್ರದೇವತೆ, ಸತ್ಯದೇವತೆ, ಸಂಕೋಲೆ ಗುಳಿಗ, ರಾಹುಗುಳಿಗ, ಕೊರಗಜ್ಜ ಮೊದಲಾದ ಸಾನಿಧ್ಯವಿದೆ.
ಅನೇಕ ಘಟನೆಗಳು ಕಾರಂಬಡೆ ಕ್ಷೇತ್ರದ ಮಹಿಮೆಯನ್ನು ಸಾರುತ್ತದೆ.
ಅಗ್ನಿಗೆ ಸಮಾನವಾದ ಶಕ್ತಿ ಈ ಕ್ಷೇತ್ರದ ಲ್ಲಿ ಇದೆ ಎಂದು ಅವರು ತಿಳಿಸಿದರು.

ಅನುವಂಶೀಯ ಆಡಳಿತ ಮೊಕ್ತೇಸರ ಅರುಣ್ ಕುಮಾರ್ ಗೌರವಾಧ್ಯಕ್ಷ ಕೇಶವ ಶಾಂತಿ, ಪ್ರಧಾನ ಕಾರ್ಯದರ್ಶಿ ನಾಗೇಶ್, ಕೋಶಾಧಿಕಾರಿ ಜಯಶಂಕರ್ ಕಾನ್ಸಾಲೆ, ಸಂತೋಷ್ ಕುಮಾರ್ ಕೊಟ್ಟಿಂಜ, ಕೊರಗಪ್ಪ ಕೊಲಂಬೆಬೈಲು, ಕೇಶವ ಪಾಲಡ್ಕ, ಸುಮಿತ್ರ ಕಾರಂಬಡೆ ಮತ್ತಿತರರು ಉಪಸ್ಥಿತರಿದ್ದರು. ‌

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...