Wednesday, January 28, 2026

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂವರು ಸಾಧಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.26ರಂದು ಮಂಗಳೂರಿನಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನ. 1ರಂದು ನೀಡಬೇಕಿದ್ದರೂ, ಕಳೆದ ನವೆಂಬರ್‌ನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಪ್ರಶಸ್ತಿ ವಿತರಣೆಯಾಗಿರಲಿಲ್ಲ.
ಪ್ರಸ್ತುತ ಬಂಟ್ವಾಳ ಕ್ಷೇತ್ರದ ಹಿರಿಯ ನಾಟಕ ಕಲಾವಿದ ಎಚ್ಕೆ ನಾಯನಾಡು, ಕೋಳಿ ನೃತ್ಯ ಖ್ಯಾತಿಯ ಅಶೋಕ್ ಪೊಳಲಿ ಹಾಗೂ ನಾಗಸ್ವರ ವಾದಕ ಪ್ರಶಾಂತ್ ಜೋಗಿ ಅವರು ಆಯ್ಕೆಯಾಗಿದ್ದಾರೆ.

ಎಚ್ಕೆ ನಾಯನಾಡು
ರಂಗನಿರ್ದೇಶಕ, ಸಾಹಿತಿ, ಉದ್ಘೋಷಕ ಎಚ್ಕೆ ನಯನಾಡು ಅವರು ತಾಲೂಕಿನ ಮಣಿಹಳ್ಳ ಪಣೆಕಲಪಡ್ಪುನಲ್ಲಿ ನೆಲೆಸಿದ್ದಾರೆ. ನಾಟಕ ರಚನೆಗಾರರಾಗಿ, ನಟರಾಗಿ,ನಿರ್ದೇಶಕರಾಗಿ, ಕವಿಯಾಗಿ, ಸಂಘಟಕರಾಗಿ, ಸಾಹಿತಿಯಾಗಿ, ಚಲನಚಿತ್ರ ಕಲಾವಿದರಾಗಿ, ಸಂಘಟಕರಾಗಿ, ಸಾಮಾಜಿಕ/ ಸಾಹಿತ್ಯ/ ಕಲೆ/ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ಅಶೋಕ್ ಪೊಳಲಿ
ಕೋಳಿ ನೃತ್ಯದ ಮೂಲಕ ಹೆಸರು ಮಾಡಿರುವ ಅಶೋಕ್ ಪೊಳಲಿಯವರು ಕರಿಯಂಗಳ ಗ್ರಾಮದ ಪಡ್ಪು ಮನೆ ನಿವಾಸಿಯಾಗಿದ್ದಾರೆ. ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡುವ ಮೂಲಕ ಖ್ಯಾತಿ ಗಳಿಸಿದ್ದು, ಹಲವಾರು ಪ್ರತಿಷ್ಠಿತ ಟಿವೆ ಚಾನೆಲ್‌ಗಳಲ್ಲೂ ತನ್ನ ಕಲಾ ಪ್ರದರ್ಶನದ ಮೂಲಕ ಮೆಚ್ಚುಗೆ ಗಳಿಸಿದ್ದರು.

ಪ್ರಶಾಂತ್ ಜೋಗಿ ಮಿತ್ತಕೆರೆ
ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳ ನಾಗಸ್ವರ ವಾದಕರಾಗಿರುವ ಪ್ರಶಾಂತ್ ಜೋಗಿ ಮಿತ್ತಕೆರೆ ಅವರು ಸಜೀಪಮೂಡ ಗ್ರಾಮದ ಮಿತ್ತಕೆರೆ ನಿವಾಸಿಯಾಗಿದ್ದಾರೆ. ಸುಮಾರು 25 ದೇವಸ್ಥಾನಗಳು, 30 ದೈವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಖ್ಯಾತಿ ಪಡೆದಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...