Sunday, January 25, 2026

ಧಾರ್ಮಿಕ ಶೃದ್ದಾ ಭಕ್ತಿಯಿಂದ ತುಳುನಾಡಿನ ಸಕಲ ಸಂಸ್ಕ್ರತಿ ಉಳಿಸಲು ಸಾಧ್ಯ- ಸುರೇಶ್ ಪರ್ಕಳ

ಬಂಟ್ವಾಳ: ಧಾರ್ಮಿಕ ಶೃದ್ದಾ ಭಕ್ತಿಯಿಂದ ತುಳುನಾಡಿನ ಸಕಲ ಸಂಸ್ಕ್ರತಿ ಉಳಿಸಲು ಸಾಧ್ಯವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಾಮರಸ್ಯ ಸಂಯೋಜಕ ಸುರೇಶ್ ಪರ್ಕಳ ಹೇಳಿದರು.
ಅವರು ನವೋದಯ ಯುವಕ ಸಂಘದ 30ನೇ ವಾರ್ಷಿಕೋತ್ಸವದ ಅಂಗವಾಗಿ ಜರಗಿದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಬೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಜೊತೆಗೆ ಗುರು ಹಿರಿಯರಿಗೆ ಗೌರವ, ಮೂಲನಂಬಿಕೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಯುವ ಸಮುದಾಯ ಮುನ್ನಡೆಯಲು ಅವರು ಕರೆ ನೀಡಿದರು.
ಕಾಮಾಜೆಯ ನವೋದಯ ಸಂಘ, ಸಂಘಟನೆಯ ಜೊತೆಯಲ್ಲಿ ಧರ್ಮ ರಕ್ಷಣೆಯ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಅವರು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ಮಾಜಿ ಸೈನಿಕ, ಕೆನರಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಮುರಳೀಕೃಷ್ಣ ಸೋಮಯಾಜಿ ಅರ್ಬಿ ಮಾತನಾಡಿ, ಸರಕಾರ ಜಾರಿಗೆ ತರುವ ಎಲ್ಲಾ ಯೋಜನೆಗಳನ್ನು ಗ್ರಾಮೀಣ ಭಾಗದ ಪ್ರತಿಯೊಬ್ಬ ಫಲಾನುಭವಿಗಳಿಗೆ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ಇಂತಹ ಸಂಘಟನೆಗಳು ಮಾಡಬೇಕಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಅಧ್ಯಕ್ಷ ರಾಜೇಶ್ ಎಲ್. ನಾಯಕ್, ಬಂಟ್ವಾಳ ಪುರಸಭಾ ಸದಸ್ಯೆ ಶೋಭಾ ಹರೀಶ್ಚಂದ್ರ ಉಪಸ್ಥಿತರಿದ್ದರು.
ಯುವ ಕವಿ ಯತೀಶ್ ಕಾಮಾಜೆ ಹಾಗೂ 10ನೇ ತರಗತಿ ಕಲಿಕಯಲ್ಲಿ ಅಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿನಿ ನಿಶ್ಮಿತಾ ಕುಲಾಲ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸ್ಥಳೀಯ ವಿಕಲಚೇತನ 4 ಕುಟುಂಬಗಳಿಗೆ ಆರ್ಥಿಕ ಧನ ಸಹಾಯ ನೀಡಲಾಯಿತು.
ಸಂಘದ ಅಧ್ಯಕ್ಷ ಭಾಸ್ಕರ ಟೈಲರ್‍ ಕಾಮಾಜೆ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕುಲಾಲ್ ಮೈರಾನದ ಪಾದೆ, ಜೊತೆ ಕಾರ್ಯದರ್ಶಿಗಳಾದ ವಿಜಯ ಮೈರಾನ್ ಪಾದೆ, ರಾಜೇಶ್ ಭಂಡಾರಿ ಮೈರಾನ್ ಪಾದೆ, ಕೋಶಾಧಿಕಾರಿ ವಿನೋದ್ ಕುಮಾರ್‍ ಕಾಮಾಜೆ ಉಪಸ್ಥಿತರಿದ್ದರು.
ಸದಸ್ಯ ಬಾಲಕೃಷ್ಣ ಕಾಮಾಜೆ ಸ್ವಾಗತಿಸಿ, ಜಯಂತ್ ಕುಲಾಲ್ ಕಾಮಾಜೆ ವಂದಿಸಿದರು. ಸಂಘದ ಉಪಾಧ್ಯಕ್ಷ ಉಮೇಶ್ ಮೈರಾನ್ ಪಾದೆ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.
ರಾತ್ರಿ ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ನಡೆಯಿತು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...