Thursday, February 13, 2025

ಬಿ.ಸಿ.ರೋಡ್: ಬಾಲಕಾರ್ಮಿಕ ಜಾಗೃತಿ ಅಭಿಯಾನ

ಬಂಟ್ವಾಳ: ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲಾ ವಠಾರದಲ್ಲಿ ಮಕ್ಕಳಿಗೆ ಬಾಲಕಾರ್ಮಿಕ ತಡೆಯುವ ಕಾಯ್ದೆಯ ಕುರಿತಾಗಿ ಜಾಗೃತಿ ಅಭಿಯಾನ ಇತ್ತೀಚೆಗೆ ಜರಗಿತು. ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಂಘ ಮತ್ತು ಕಾರ್ಮಿಕ ಇಲಾಖೆ ಬಂಟ್ವಾಳ ಇವರ ವತಿಯಿಂದ ಕಾರ್ಯಕ್ರಮ ಸಂಯೋಜಿಸಲಾಗಿತ್ತು. ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತ ಬಿ.ನಾಗರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಬಿ.ಸಿ.ರೋಡಿನ ಆಶ್ರಮ ಶಾಲೆ ಮತ್ತು ಕುದ್ದುಪದವು ಸರಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.
ಸಾರ್ವಜನಿಕರಿಗೆ ಬಾಲಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ ಬಗ್ಗೆ ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿಯವರು ಮಾಹಿತಿ ನೀಡಿದರು. ಬೀದಿ ನಾಟಕ ತಂಡದ ಪ್ರಮುಖರಾದ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಶ್ರೀನಿವಾಸ ನಾಯಕ್, ಶಶಿಧರ್ ವಿ. ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...