Friday, June 27, 2025

ಬೀದಿ ವ್ಯಾಪಾರಿಗಳಿಂದಾಗಿ ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಬಿಸಿರೋಡಿನ‌ ಹೃದಯ ಭಾಗವಾದ ಮಿನಿವಿಧಾನ ಸೌಧದ ಕಚೇರಿಯ ಬಳಿಯಲ್ಲಿ ಪುರಸಭಾ ವ್ಯಾಪ್ತಿಯ ರಸ್ತೆಯಲ್ಲಿ ವ್ಯಾಪಾರ ಮಾಡುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದೆ.
ಬಿಸಿರೋಡನಿಂದ ಕೈಕುಂಜೆ ಸಂಪರ್ಕದ ರಸ್ತೆಯಲ್ಲಿ ದಿನಕಳೆದಂತೆ ಬೀದಿ ವ್ಯಾಪಾರಿಗಳ ತಳ್ಳುಗಾಡಿಗಳು, ರಿಕ್ಷಾ ಟೆಂಪೋಗಳ ಮೂಲಕ ವ್ಯಾಪಾರ ವಹಿವಾಟುಗಳು ಜಾಸ್ತಿಯಾಗುತ್ತಿದ್ದು, ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇದೇ ರಸ್ತೆಯಲ್ಲಿ ಶಾಸಕರ ಕಚೇರಿ, ಮಿನಿ ವಿಧಾನ ಸೌಧ, ನ್ಯಾಯಾಲಯ, ತಾಲೂಕು ಪಂಚಾಯತ್, ಕೆ.ಇ.ಬಿ., ಶಿಕ್ಷಣ ಇಲಾಖೆ, ರೈಲು ನಿಲ್ದಾಣ, ಎ.ಪಿ.ಎಂ.ಸಿ, ಸಿ.ಡಿ.ಪಿ.ಒ, ಸಮಾಜ ಕಲ್ಯಾಣ ಇಲಾಖೆ ಹೀಗೆ ಎಲ್ಲಾ ಸರಕಾರಿ ಕಚೇರಿಗಳಿಗೆ ಇದೇ ರಸ್ತೆಯಲ್ಲಿ ತೆರಳಬೇಕಾದ ಅನಿವಾರ್ಯ ಪರಿಸ್ಥಿತಿ ಇದ್ದರೂ ಇಲ್ಲಿ ನಿತ್ಯ ರಸ್ತೆಯಲ್ಲಿ ಸಂಚಾರಕ್ಕೆ ತಳ್ಳುಗಾಡಿಗಳ ವ್ಯಾಪಾರದಿಂದ ಅಡಚಣೆಯಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕವಾಗಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಪುರಸಭೆ ಮಾಡಿಕೊಡುತ್ತಿದ್ದರೆ, ಅವರು ಬೀದಿಗೆ ಬರುವ ಅವಶ್ಯಕತೆ ಇರಲಿಲ್ಲ. ತಹಶೀಲ್ದಾರ್ ಅವರ ಕಚೇರಿಯ ಅಂಗಳದಲ್ಲಿ ಬೀದಿ ವ್ಯಾಪಾರಿಗಳು ಬೀಡು ಬಿಟ್ಟಿದ್ದಾರೆ, ಅದರೂ ಅವರು ಯಾಕೆ ಮೌನವಹಿಸಿದ್ದಾರೆ ಎಂಬುದು ಆಶ್ಚರ್ಯಕರ ಸಂಗತಿ.
ಶಾಸಕರು ಮತ್ತು ತಹಶೀಲ್ದಾರ್ ಅವರು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಿ ಬೀದಿ ವ್ಯಾಪಾರಿಗಳ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಾರ್ವಜನಿಕರಿಗೆ ಹಾಗೂ ಇಲಾಖಾ ವಾಹನಗಳಿಗೆ ಸಂಚಾರಕ್ಕೆ ತೊಂದರೆಯಾಗುತ್ತಿರುವುದರಿಂದ ಪ್ರಸ್ತುತ ಅವರನ್ನು ಈ ರಸ್ತೆಯಿಂದ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...