Wednesday, July 9, 2025

ಜನಪ್ರತಿನಿಧಿಗಳು ಇಚ್ಛಾಶಕ್ತಿಯೊಂದಿಗೆ ಭರವಸೆಗಳನ್ನು ಈಡೇರಿಸಿ ಜನ ಸಾಮಾನ್ಯರ ವಿಶ್ವಾಸಗಳಿಸುವುದು ಅತ್ಯವಶ್ಯ- ಯು.ಟಿ.ಖಾದರ್

ಬಂಟ್ವಾಳ: ಚುನಾವಣಾ ಸಂದರ್ಭದಲ್ಲಿ ಜನರ ಬೇಡಿಕೆಗನುಸಾರವಾಗಿ ನೀಡಿದ ಭರವಸೆಗಳನ್ನುಈಡೇರಿಸಿದಲ್ಲಿ ಜನಪ್ರತಿನಿಧಿಗಳು ಜನಸಾಮಾನ್ಯರ ವಿಶ್ವಾಸ ಉಳಿಸಿದಂತಾಗುವುದು, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಮಂಗಳೂರು ಶಾಸಕರು, ಮಾಜಿ ಸಚಿವ ಯು.ಟಿ.ಖಾದರ್ ಅವರು ಇರಾ ಗ್ರಾಮದ 1 ಕೋಟಿ 85 ಲಕ್ಷ ರೂಪಾಯಿ ಅಂದಾಜು ಮೊತ್ತದ ಕಾಪಿಕಾಡು, ಪಂಜಾಜೆ, ಸೂತ್ರಬೈಲು, ನೂಜಿ, ಕೊಕಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ತಿಳಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಲೂಕು ಪಂಚಾಯತ್ ಸದಸ್ಯ ಹೈದರ್ ಕೈರಂಗಳ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಅಬ್ದುಲ್ ಜಲೀಲ್, ನಾಸೀರ್ ನಡುಪದವು, ಅರುಣ್ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರಾದ ಸಮಿಯುಲ್ಲಾ ಕುಕ್ಕಾಜೆ, ಜಿ.ಎಂ.ಇಬ್ರಾಹಿಂ, ಹನೀಫ್ ಬಾಳೆಪುಣಿ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಕುಮಾರ್ ಸೂತ್ರಬೈಲು, ಗಣ್ಯರಾದ ಪದ್ಮನಾಭ ಕಾಜವ, ವಿಶ್ವನಾಥ ಶೆಟ್ಟಿ ಕುಕ್ಕಾಜೆ, ಇಸ್ಮಾಯಿಲ್ ದರ್ಬೆ, ಮೊಯಿದಿನ್ ಕುಂಞಿ ದರ್ಭೆ, ಕಿಶೋರ್ ಸುವರ್ಣಬೈಲು, ಗುತ್ತಿಗೆದಾರರಾದ ನಾಸೀರ್ ಕೊಣಾಜೆ, ಹಾಗೂ ಊರಿನ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...