Saturday, January 31, 2026

ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಮೂರು ಮಕ್ಕಳ ತಾಯಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ ಎಂಬಲ್ಲಿ ಶನಿವಾರ ಪೂರ್ವಾಹ್ನ ನಡೆದಿದೆ.

ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ದಂಪತಿಗೆ ಮೂವರು ಮಕ್ಕಳು ಇದ್ದು, ತುಂಬೆ ನಿವಾಸಿಗಳಾದ ದಂಪತಿ ಕೆಲವು ಸಮಯದ ಹಿಂದೆ ಪೆರ್ಲದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಲಾಕ್ ಡೌನ್ ಸಮಯದಲ್ಲಿ ಹೊರ ಹೋಗದಂತೆ ಹೇಳಿದರೂ ಆಟೋ ಚಾಲಕನಾಗೊರುವ ಪತಿ ಆಟೋದೊಂದಿಗೆ ಮನೆಯಿಂದ ಹೊರ ಹೋದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...