Saturday, January 31, 2026

ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಕಂದಾಯ ಇಲಾಖಾ ತಂಡ ರೇಷನ್ ವಿತರಣೆ

ಬಂಟ್ವಾಳ: ತಹಸೀಲ್ದಾರ್ ರಶ್ಮಿ ಎಸ್. ಆರ್. ನೇತೃತ್ವದಲ್ಲಿ ಕಂದಾಯ ಇಲಾಖೆಯ ತಂಡ ಗ್ರಾಮದ ಜನರಿಗೆ ರೇಷನ್ ವಿತರಿಸುವ ಉಸ್ತುವಾರಿಯನ್ನು ಶುಕ್ರವಾರ ವಹಿಸಿಕೊಂಡಿತು.

ತುಂಬೆ ಸರಕಾರಿ ಶಾಲೆಯಲ್ಲಿ ಸುಮಾರು 350 ಮಂದಿಗೆ ರೇಷನ್ ಒದಗಿಸಲಾಯಿತು. ಕ್ವಾರಂಟೈನ್ ಪ್ರದೇಶಗಳ ಮನೆ ಮನೆಗೆ ತಲುಪಿಸುವ ಜವಾಬ್ದಾರಿಯನ್ನು ಗ್ರಾ.ಪಂ. ನಿರ್ವಹಿಸಿತು. ಉಳಿದವರಿಗೆ ಶಾಲೆಯಲ್ಲಿ ರೇಷನ್ ವಿತರಣಾ ಕಾರ್ಯ ನಡೆಯಿತು. ಬಂಟ್ವಾಳ ತಾಲೂಕು ಕಚೇರಿಯ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮ ಲೆಕ್ಕಿಗರಾದ ಪ್ರಶಾಂತ್, ನಾಗರಾಜ್, ವಿಜೇತಾ, ಗ್ರಾಮ ಸಹಾಯಕರಾದ ರೂಪೇಶ್ ಸದಾನಂದ, ತೂಕ ಅಳತೆ, ವಿತರಣೆ ಸಹಿತ ಲೆಕ್ಕಪತ್ರವನ್ನು ನೋಡಿಕೊಳ್ಳುವ ಕಾರ್ಯವನ್ನು ನಡೆಸಿದರು. ಒಂದೆರಡು ದಿನಗಳಲ್ಲಿ ಇಡೀ ಗ್ರಾಮಕ್ಕೆ ರೇಷನ್ ವಿತರಣೆ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...